ಆರ್‌ಸಿಬಿ ಗೆ ನೂತನ ಕೋಚ್ ನೇಮಕ

Update: 2019-08-23 16:54 GMT

ಬೆಂಗಳೂರು, ಆ.23: ಆಸ್ಟ್ರೇಲಿಯದ ಮಾಜಿ ಬ್ಯಾಟ್ಸ್‌ಮನ್ ಸೈಮನ್ ಕಾಟಿಚ್ ಐಪಿಎಲ್ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ನೂತನ ಕೋಚ್ ಆಗಿ ನೇಮಕಗೊಂಡಿದ್ದಾರೆ.

ಕಾಟಿಚ್ ಈ ಮೊದಲು ಕೋಲ್ಕತಾ ನೈಟ್ ರೈಡರ್ಸ್‌ ತಂಡದ ಸಹಾಯಕ ಕೋಚ್ ಆಗಿ ಅಪಾರ ಅನುಭವ ಪಡೆದಿದ್ದಾರೆ. ಕಳೆದ 2019ರ ಆವೃತ್ತಿಯಲ್ಲೂ ಅವರು ಸಹಾಯಕ ಕೋಚ್ ಆಗಿ ಸೇವೆ ಸಲ್ಲಿಸಿದ್ದರು.

ಇತ್ತೀಚೆಗೆ ಮ್ಯಾಂಚೆಸ್ಟರ್‌ನ ಫ್ರಾಂಚೈಸ್ ತಂಡವೊಂದರ ಪ್ರಧಾನ ಕೋಚ್ ಆಗಿ ನೇಮಕಗೊಂಡಿದ್ದರು. ಇದೆ ವೇಳೆ ನ್ಯೂಝಿಲ್ಯಾಂಡ್ ತಂಡದ ಮಾಜಿ ಕೋಚ್ ಮೈಕ್ ಹೆಸನ್ ಆರ್‌ಸಿಬಿಯ ಕ್ರಿಕೆಟ್ ನಿರ್ವಹಣಾ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News