ಡ್ರಗ್ಸ್ ಕೇಸ್‌ನಲ್ಲಿ ಸಿಕ್ಕಬಿದ್ದರೆ ಕಠಿಣ ಕ್ರಮ: ಸಿಸಿಬಿ ಅಧಿಕಾರಿಗಳ ಖಡಕ್ ಎಚ್ಚರಿಕೆ

Update: 2019-08-23 17:05 GMT

ಬೆಂಗಳೂರು, ಆ.23: ರಾಜಧಾನಿಯಲ್ಲಿ ಅವ್ಯಾಹತವಾಗಿರುವ ಮಾದಕ ವಸ್ತು ಸಾಗಣೆ ಹಾಗೂ ಮಾರಾಟಕ್ಕೆ ಕಡಿವಾಣ ಹಾಕಲು ವಿಶೇಷ ಕಾರ್ಯಾಚರಣೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳು, ನಗರದಲ್ಲಿ ಡ್ರಗ್ ಪೆಡ್ಲರ್‌ಗಳ ಪರೇಡ್ ನಡೆಸಿ ಖಡಕ್ ಎಚ್ಚರಿಕೆ ನೀಡಿದರು.

ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿ ಆವರಣದಲ್ಲಿ ಶುಕ್ರವಾರ ನಡೆಸಲಾದ ಪರೇಡ್‌ನಲ್ಲಿ 100ಕ್ಕೂ ಅಧಿಕ ಡ್ರಗ್ಸ್ ಪೆಡ್ಲರ್‌ಗಳು ಹಾಜರಾದರು. ಅವರೆಲ್ಲರಿಗೂ ಖಡಕ್ ಎಚ್ಚರಿಕೆ ನೀಡಿದ ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಸಂದೀಪ್ ಪಾಟೀಲ್, ಮಾದಕ ವಸ್ತು ಮಾರಾಟ ಹಾಗೂ ಸಾಗಣೆಯಿಂದ ದೂರ ಉಳಿಯಿರಿ. ಅಂಥ ಪ್ರಕರಣದಲ್ಲಿ ಪದೇ ಪದೇ ಸಿಕ್ಕಿಬಿದ್ದರೆ ಕಠಿಣ ಕಾನೂನು ಅಡಿ ಜೈಲಿಗೆ ಕಳುಹಿಸುತ್ತೇವೆ ಎಂದರು.

ನಿಷೇಧಿತ ಡ್ರಗ್ಸ್‌ಗಳ ಮಾರಾಟ ಹಾಗೂ ಸೇವನೆ ಕಂಡು ಬಂದಲ್ಲಿ ಎನ್‌ಡಿಪಿಎಸ್ ಉಚಿತ 1908 ಸಂಖ್ಯೆಗೆ ಕರೆ ಮಾಡಿ ಪೊಲೀಸ್ ಅಧಿಕಾರಿಗಳಿಗೆ ಕೂಡಲೇ ಮಾಹಿತಿ ನೀಡುವಂತೆ ಇದೇ ವೇಳೆ, ಆಯುಕ್ತರು ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News