ಮಹಿಳೆಯರಿಗೆ ಉದ್ಯಮಶೀಲ ತರಬೇತಿಗೆ ಅರ್ಜಿ ಆಹ್ವಾನ

Update: 2019-08-23 17:32 GMT

ಮಂಗಳೂರು, ಆ.23: ಮಹಿಳೆಯರಿಗೆ ವಿವಿಧ ವೃತ್ತಿಗಳ ಬಗ್ಗೆ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಬಗ್ಗೆ ತರಬೇತಿ ನೀಡುವ ಮೂಲಕ ಮಹಿಳೆಯರ ಆರ್ಥಿಕ ಸ್ಥಿತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಮಹಿಳಾ ತರಬೇತಿ ಕಾರ್ಯಕ್ರಮದಡಿ ವಿವಿಧ ವೃತ್ತಿ ತರಬೇತಿಗಳನ್ನು ನೀಡಲು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಡಿ ಅಕ್ರಿಡೇಶನ್ ಪಡೆದಿರುವ ಸಂಸ್ಥೆಗಳಿಂದ ಆ.30ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.

ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (ದೂ.ಸಂ: 0824-2458173)ಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News