ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2019-08-23 17:35 GMT

ಮಂಗಳೂರು, ಆ.23: ಭಾರತ ಸರಕಾರದ ನೆಹರೂ ಯುವ ಕೇಂದ್ರ ಮಂಗಳೂರು ಇವರಿಂದ 2018-19ನೇ ಸಾಲಿಗೆ ಜಿಲ್ಲಾ ಯುವ ಮಂಡಳಿ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಜಿಲ್ಲೆಯ ಆಸಕ್ತ ಯುವಕ-ಯುವತಿ ಮಂಡಳಗಳು ಅರ್ಜಿ ಸಲ್ಲಿಸಬಹುದು. ಯುವ ಮಂಡಳಗಳು ಜಿಲ್ಲಾ ನೊಂದಾಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿಯಾಗಿದ್ದು ಹಾಗೂ ನೆಹರು ಯುವ ಕೇಂದ್ರದಲ್ಲಿ ಸಂಯೋಜನೆ ಹೊಂದಿರಬೇಕು. ಕಳೆದ ಸಾಲಿನಲ್ಲಿ 2018-19ರಲ್ಲಿ (2018ರ ಎಪ್ರಿಲ್‌ನಿಂದ 2019ರ ಮಾರ್ಚ್‌ವರೆಗೆ) ಗ್ರಾಮದ ಅಭಿವೃದ್ಧಿಗಾಗಿ ಜನಪರ ಕಾರ್ಯಕ್ರಮಗಳನ್ನು ನಡೆಸಿರಬೇಕು. (ಸಾಕ್ಷಾರತೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮಗಳು, ಪರಿಸರ ಸಂರಕ್ಷಣೆ, ಕ್ರೀಡೆ, ಸಾಂಸ್ಕೃತಿಕ, ಮಹಿಳಾ ಜಾಗೃತಿ, ವೃತ್ತಿಪರ ಶಿಕ್ಷಣ, ಗ್ರಾಮ ನೈರ್ಮಲ್ಯ, ಮಳೆ ನೀರು ಸಂಗ್ರಹ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ದಿನಗಳ ಆಚರಣೆ, ಶ್ರಮದಾನ ಇತ್ಯಾದಿ)

ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಯುವ ಮಂಡಳಕ್ಕೆ 25,000 ರೂ. ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಅರ್ಜಿಯು ರಾಜ್ಯಮಟ್ಟಕ್ಕೆ ಅರ್ಹತೆಯನ್ನು ಪಡೆಯುತ್ತದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನವಾಗಿರುತ್ತದೆ.

ಅರ್ಜಿಯನ್ನು ನೆಹರು ಯುವ ಕೇಂದ್ರ, ನೆಹರೂ ಮೈದಾನ್ ರಸ್ತೆ, ಮಂಗಳೂರು-1 ಕಚೇರಿಯಿಂದ ಪಡೆಯಬಹುದು. ವಿವರಗಳಿಗಾಗಿ (ದೂ.ಸಂ: 0824-2422264) ಸಂಪರ್ಕಿಸಬಹುದು ಎಂದು ಜಿಲ್ಲಾ ಯುವಜನ ಸಮನ್ವಯಾಧಿಕಾರಿಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News