ಮೊಸರು ಕುಡಿಕೆ : ಮದ್ಯದಂಗಡಿ ಬಂದ್

Update: 2019-08-23 17:37 GMT

ಮಂಗಳೂರು, ಆ. 23: ದ.ಕ. ಜಿಲ್ಲೆಯಲ್ಲಿ ಆ.23ರಿಂದ ಸೆಪ್ಟೆಂಬರ್ 1ರವರೆಗೆ ವಿವಿಧ ಕಡೆಗಳಲ್ಲಿ ಮೊಸರು ಕುಡಿಕೆ ಮೆರವಣಿಗೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.

ಈ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕಗಳಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವೈನ್‌ಶಾಪ್/ಬಾರ್‌ಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News