ಮೀನು ಹಿಡಿಯಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತ್ಯು

Update: 2019-08-23 17:45 GMT

ಶಿವಮೊಗ್ಗ, ಆ. 23: ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಸಿರಿಗೆರೆ ಗ್ರಾಮದಲ್ಲಿ ನಡೆದಿದೆ. 

ನಾಗೇಶಪ್ಪ (60) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಮನೆಯಿಂದ ಬಲೆಯೊಂದಿಗೆ, ಕೃಷ್ಣಪ್ಪ ಎಂಬವರ ಬಾವಿಯಲ್ಲಿ ಮೀನು ಹಿಡಿಯಲು ತೆರಳಿದ್ದರು. ಈ ವೇಳೆ ಆಯತಪ್ಪಿ ಬಾವಿಗೆ ಬಿದ್ದು ಅಸುನೀಗಿದ್ದಾರೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News