ಪ್ರಧಾನಿ ಮೋದಿಗೆ ಯುಎಇಯ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಆರ್ಡರ್ ಆಫ್ ಝಾಯೆದ್' ಪ್ರದಾನ

Update: 2019-08-24 10:58 GMT
Photo: PMO India/Twitter

ಅಬುಧಾಬಿ, ಆ.24: ಪ್ರಧಾನಿ ನರೇಂದ್ರ ಮೋದಿಯವರಿಗೆ ಯುಎಇಯ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಆರ್ಡರ್ ಆಫ್ ಝಾಯೆದ್' ಪ್ರದಾನ ಮಾಡಿ ಶನಿವಾರ ಗೌರವಿಸಲಾಗಿದೆ. ಎರಡು ದೇಶಗಳ ನಡುವೆ ದ್ವಿಪಕ್ಷೀಯ ಸಂಬಂಧಗಳನ್ನು ಸುಧಾರಿಸಲು ಅವರು ಪಟ್ಟ ಶ್ರಮವನ್ನು ಗುರುತಿಸಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.

ಈ ಹಿಂದೆ ಈ ಪ್ರಶಸ್ತಿಯನ್ನು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್, ರಾಣಿ ಎಲಿಝಬೆತ್ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರಿಗೆ ಪ್ರದಾನ ಮಾಡಲಾಗಿತ್ತು.

ಸಂಯುಕ್ತ ಅರಬ್ ಸಂಸ್ಥಾನದ ಸ್ಥಾಪಕ ಶೇಖ್ ಝಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರ ಸ್ಮರಣಾರ್ಥ ಈ ಪ್ರಶಸ್ತಿ ನೀಡಲಾಗಿದೆ.  “ಶೇಕ್ ಝಾಯೆದ್ ಅವರ ಜನ್ಮಶತಮಾನೋತ್ಸವ ಸಂದರ್ಭ ಪ್ರಧಾನಿ ಮೋದಿಗೆ ನೀಡಲಾಗುತ್ತಿರುವ ಈ ಪ್ರಶಸ್ತಿ ವಿಶೇಷ ಮಹತ್ವ ಪಡೆಯುತ್ತದೆ'' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆ ತಿಳಿಸಿದೆ.

ಎರಡೂ ದೇಶಗಳ ನಡುವೆ ವಾರ್ಷಿಕ 60 ಬಿಲಿಯನ್ ಡಾಲರ್ ವ್ಯಾಪಾರ ವಹಿವಾಟು ನಡೆಯುತ್ತಿದ್ದು, ವಿಶ್ವದಲ್ಲಿ ಭಾರತದ ಮೂರನೇ ಅತಿ ದೊಡ್ಡ ವ್ಯಾಪಾರ ಪಾಲುದಾರ ದೇಶ ಸಂಯುಕ್ತ ಅರಬ್ ಸಂಸ್ಥಾನವಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News