ಯುಎಇ: ಜಮ್ಮು ಕಾಶ್ಮೀರದಲ್ಲಿ ಹೂಡಿಕೆ ಮಾಡಲು ಅನಿವಾಸಿ ಭಾರತೀಯರಿಗೆ ಪ್ರಧಾನಿ ಕರೆ

Update: 2019-08-24 11:52 GMT

ಅಬುಧಾಬಿ : ತಮ್ಮ ಮೂರು ರಾಷ್ಟ್ರಗಳ ಪ್ರವಾಸದ  ಎರಡನೇ ಹಂತದಲ್ಲಿ ಪ್ರಧಾನಿ ಇಂದು ಅಬುಧಾಬಿಯಲ್ಲಿ  ಅನಿವಾಸಿ ಭಾರತೀಯ ಉದ್ಯಮಿಗಳ ಸಮಾವೇಶದಲ್ಲಿ ಮಾತನಾಡುತ್ತಾ  ಸಂಯುಕ್ತ ಅರಬ್ ಸಂಸ್ಥಾನದಲ್ಲಿರುವ ಭಾರತೀಯ ಮೂಲದ ಉದ್ಯಮಿಗಳು  ಭಾರತದಲ್ಲಿ, ಮುಖ್ಯವಾಗಿ ಜಮ್ಮು ಕಾಶ್ಮೀರದಲ್ಲಿ ಹೂಡಿಕೆ ಮಾಡಲು ಆಸಕ್ತಿ ವಹಿಸಬೇಕೆಂದು ಕರೆ ನೀಡಿದರು.

ರಾಜಕೀಯ ಸುಸ್ಥಿರತೆ ಹಾಗೂ ಸೂಕ್ತ ನೀತಿ ನಿಯಮಾವಳಿಗಳು ಭಾರತವನ್ನು ಒಂದು ಆಕರ್ಷಕೆ ಹೂಡಿಕೆ ತಾಣವಾಗಿಸಿದೆ ಎಂದು ಅವರು ಹೇಳಿಕೊಂಡರು.

''ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ನಲ್ಲಿ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಿವೆ. ದೀರ್ಘಕಾಲದ ತನಕ ಈ ಪ್ರದೇಶಗಳು ಯಾವುದೇ ಅಭಿವೃದ್ಧಿ ಕಂಡಿಲ್ಲ'' ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದರು.

ತಮ್ಮ ಸರಕಾರ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ರದ್ದುಗೊಳಿಸಿರುವ ಕುರಿತು ಉಲ್ಲೇಖಿಸಿದ ಅವರು ''ಇದು ಆ ಪ್ರದೇಶದಲ್ಲಿ ಹೂಡಿಕೆಗೆ ಪೂರಕ ವಾತಾವರಣ ಸೃಷ್ಟಿಸಿದೆ'' ಎಂದರು.

''ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಗೆ ನೀಡುವ ಮಹತ್ವದಿಂದಾಗಿ ಅದು ಭಾರತದ ಅಭಿವೃದ್ಧಿಗೆ ಪೂರಕವಾಗುವುದರ ಜತೆಗೆ ರಾಜ್ಯದ ಯುವಜನತೆಗೆ ಉದ್ಯೋಗಾವಕಾಶಗಳನ್ನೂ ಸೃಷ್ಟಿಸುವುದು'' ಎಂದು ಪ್ರಧಾನಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News