ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ: ಆ.27ಕ್ಕೆ ಕಾರ್ಮಿಕ ಇಲಾಖೆ ಮಹತ್ವದ ಸಭೆ

Update: 2019-08-24 13:13 GMT

ಬೆಂಗಳೂರು, ಆ.24: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಸಂಬಂಧ ಸರಕಾರದ ಅಧಿಸೂಚನೆ ಅಂತಿಮಗೊಳಿಸಲು ಆ.27ರಂದು ಕಾರ್ಮಿಕ ಇಲಾಖೆ ಮಹತ್ವದ ಸಭೆ ಕರೆದಿದೆ.

ಹಿಂದಿನ ಸರಕಾರದ ಅವಧಿಯಲ್ಲಿ ಖಾಸಗಿ ವಲಯದ ಸಿ ಮತ್ತು ಡಿ ವರ್ಗದ ಹುದ್ದೆಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕು, 15 ವರ್ಷಗಳಿಂದ ಸರಕಾರದ ಸೌಲಭ್ಯ ಬಳಸಿಕೊಳ್ಳುತ್ತಿರುವ ಖಾಸಗಿ ಸಂಸ್ಥೆಗಳು ಹಾಗೂ ಸರಕಾರದ ಸೌಲಭ್ಯ ಬಳಸಿಕೊಳ್ಳದೆ 10 ವರ್ಷಗಳಿಂದ ರಾಜ್ಯದಲ್ಲಿರುವ ಖಾಸಗಿ ಸಂಸ್ಥೆಗಳು ಕನ್ನಡಿಗರಿಗೆ ಆದ್ಯತೆ ಮೇಲೆ ಉದ್ಯೋಗ ನೀಡಬೇಕು ಎಂದು ಅಧಿಸೂಚನೆ ಹೊರಡಿಸಿ ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನಿಸಲಾಗಿತ್ತು.

ಕನ್ನಡ ಪರ, ಪ್ರಗತಿಪರ ಸಂಘಟನೆಗಳು, ಹೋರಾಟಗಾರರು, ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿದ್ದರು. ಎಲ್ಲ ಸಂಸ್ಥೆಗಳಲ್ಲಿಯೂ ಶೇ.100 ಉದ್ಯೋಗ ಸಿಗಬೇಕು, ಆದ್ಯತೆ ಬದಲು ಮೀಸಲಾತಿ ಎಂದಾಗಬೇಕು ಎಂದು ಆಕ್ಷೇಪಣೆ ಸಲ್ಲಿಸಿದ್ದರು. ಈ ನಿಟ್ಟಿನಲಿ ಒಂದು ಸುತ್ತಿನ ಸಭೆ ನಡೆದಿದ್ದು, ಆಕ್ಷೇಪಣೆಗಳನ್ನು ಅಂತಿಮ ಮಾಡಲು 27 ರಂದು ಮತ್ತೊಂದು ಸಭೆ ನಡೆಯುತ್ತಿದೆ. ಇದರಲ್ಲಿ ಕೈಗಾರಿಕೋದ್ಯಮಿಗಳು, ಸಂಸ್ಥೆಗಳು, ಆಕ್ಷೇಪಣೆಗಳು ಸಲ್ಲಿಸಿದವರು, ಅಧಿಕಾರಿಗಳು, ಕಾನೂನು ತಜ್ಞರು ಪಾಲ್ಗೊಳ್ಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News