×
Ad

ಆ.28-29ರಂದು ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್

Update: 2019-08-24 20:16 IST

ಉಡುಪಿ, ಆ.24: ಮಂಗಳೂರು ವಿಶ್ವವಿದ್ಯಾನಿಲಯ, ಅಜ್ಜರಕಾಡು ಡಾ.ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಬ್ಯಾಂಕ್ ಆಫ್ ಬರೋಡಾ, ಉಡುಪಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಗಳ ಸಹಯೋಗದೊಂದಿಗೆ ಮಂಗಳೂರು ವಿವಿ ಅಂತರ್ ಕಾಲೇಜು ಮಟ್ಟದ ಪುರುಷ ಹಾಗೂ ಮಹಿಳೆಯರ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ್ನು ಆ.28 ಮತ್ತು 29ರಂದು ಅಜ್ಜರಕಾಡು ಒಳಂಗಾಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಆ.28ರಂದು ಬೆಳಗ್ಗೆ 9:30ಕ್ಕೆ ಟೂರ್ನಿಯನ್ನು ಉಡುಪಿ ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ.ಜಿ.ಶಂಕರ್ ವಹಿಸಲಿರುವರು. ಮುಖ್ಯ ಅತಿಥಿಯಾಗಿ ಬ್ಯಾಂಕ್ ಆಫ್ ಬರೋಡಾದ ಉಡುಪಿ ಪ್ರಾದೇಶಿಕ ಪ್ರಬಂಧಕ ರವೀಂದ್ರ ರೈ ಭಾಗವಹಿಸಲಿರುವರು.

ಆ.29ರಂದು ಸಂಜೆ 6ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ವಹಿಸಲಿರುವರು ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ಭಾಸ್ಕರ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News