ಪಿಂಚಣಿದಾರರ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಿ: ವಿದ್ಯಾಕುಮಾರಿ

Update: 2019-08-24 16:17 GMT

ಉಡುಪಿ, ಆ.24:ಪಿಂಚಣಿ ಪಡೆಯುವಲ್ಲಿ ಪಿಂಚಣಿದಾರರು ಎದುರಿಸು ತ್ತಿರುವ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಆದಷ್ಟು ಶೀಘ್ರದಲ್ಲಿ ಪರಿಹರಿ ಸುವಂತೆ, ಪಿಂಚಣಿ ತರಿಸುವ ಎಲ್ಲಾ ಬ್ಯಾಂಕ್‌ಗಳ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆಗಳನ್ನು ನೀಡಿದ್ದಾರೆ.

ಶುಕ್ರವಾರ ಉಡುಪಿ ಜಿಲ್ಲಾಡಳಿತ, ಪಿಂಚಣಿ ಸಣ್ಣ ಉಳಿತಾಯ ಇವುಗಳ ಸಹಭಾಗಿತ್ವದಲ್ಲಿ ಮಣಿಪಾಲದಲ್ಲಿರುವ ಜಿಪಂನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಕೇಂದ್ರ ಹಾಗೂ ರಾಜ್ಯ ಸರಕಾರಿ ನಿವೃತ್ತ ನೌಕರರ ಪಿಂಚಣಿಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ಆಲಿಸಿ ಪಿಂಚಣಿ ಅದಾಲತ್ ಕಾರ್ಯಕ್ರವುದಲ್ಲಿ ಅವರು ಮಾತನಾಡುತಿದ್ದರು.

ನಿವೃತ್ತ ಸರಕಾರಿ ನೌಕರರ ಪಿಂಚಣಿ ಸಂಬಂಧಿತ ಸಮಸ್ಯೆ ಹಾಗೂ ಕುಂದು ಕೊರತೆಗಳನ್ನು ಸ್ಥಳದಲ್ಲಿ ನಿವಾರಿಸುವುದೇ ಪಿಂಚಣಿ ಅದಾಲತ್‌ನ ಮುಖ್ಯ ಉದ್ದೇಶವಾಗಿದೆ. ಪಿಂಚಣಿ ಸಮಸ್ಯೆಗೆ ಸಂಬಂಧಿಸಿದಂತೆ ಸಭೆಯಲ್ಲಿ ನೀಡಲಾದ ಅರ್ಜಿಗಳಿಗೆ ಸಂಬಂಧಪಟ್ಟ ಬ್ಯಾಂಕ್ ಮುಖ್ಯಸ್ಥರು ಸ್ಪಷ್ಟವಾದ ಹಿಂಬರಹ ನೀಡುವಂತೆ ಅವರು ಸೂಚನೆ ನೀಡಿದರು.

ತಾಂತ್ರಿಕ ಕಾರಣಗಳಿಂದ ಎದುರಾಗಿರುವ ಸಮಸ್ಯೆಗಳ ಬಗ್ಗೆ ಹೆಚ್ಚಿನ ದೂರುಗಳನ್ನು ಆಲಿಸಿದ ಅಪರ ಜಿಲ್ಲಾಧಿಕಾರಿ, ಬ್ಯಾಂಕಿನಲ್ಲಿ ನಡೆಯುವ ಸಭೆಯಲ್ಲಿ ಪಿಂಚಣಿ ಅದಾಲತ್‌ಗೆ ಸಂಬಂಧಿಸಿದ ಮಾಹಿತಿಯನ್ನು ಅಜೆಂಡವಾಗಿ ಪರಿಗಣಿಸಿ, ಹಿರಿಯ ನಾಗರಿಕರ ಅರ್ಜಿಗಳಿಗೆ ಹೆಚ್ಚಿನ ಆಧ್ಯತೆ ನೀಡಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು.

ಬ್ಯಾಂಕಿನಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಕೌಂಟರಿನ ವ್ಯವಸ್ಥೆ ಕಲ್ಪಿಸಿ ಸೇವೆ ಒದಗಿಸಬೇಕು. ಪಿಂಚಣಿಗೆ ಸಂಬಂಧಿಸಿದ ಸೇವೆಗಾಗಿ ಹಿರಿಯ ನಾಗರಿಕರು ವಿನಾಕಾರಣ ಅಲೆದಾಡುವಂತಾಗಬಾರದು. ಪಿಂಚಣಿ ಲಭ್ಯತೆಯಲ್ಲಿ ಉಂಟಾಗಿ ರುವ ಸಮಸ್ಯೆಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸುವಂತೆ ಸಂಬಂಧ ಪಟ್ಟ ಬ್ಯಾಂಕ್ ಮುಖ್ಯಸ್ಥರಿಗೆ ಸೂಚನೆ ನೀಡಿದರು. ಪಿಂಚಣಿಗೆ ಸಂಬಂಧಿಸಿದ ವೈಯಕ್ತಿಕ ಸಮಸ್ಯೆಗಳಿದ್ದರೆ ನೇರವಾಗಿ ಅಥವಾ ಬರಹ ರೂಪದಲ್ಲಿ ಅರ್ಜಿಯನ್ನು ಪಿಂಚಣಿ ಅದಾಲತ್ ಅಧಿಕಾರಿಗೆ ಸಲ್ಲಿಸಬಹುದು ಎಂದು ತಿಳಿಸಿದರು.

ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಎಸ್‌ತೋನ್ಸೆ ಅವರು ಪಿಂಚಣಿ ಸಮಸ್ಯೆಗೆ ಸಂಬಂಧಿಸಿ 11 ಅಂಶಗಳ ಮನಯನ್ನು ಅಪರ ಜಿಲ್ಲಾಧಿಕಾರಿಗೆ ಸಲ್ಲಿಸಿದರು. ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಲೀಡ್ ಬ್ಯಾಂಕ್ ಮೆನೇಜರ್ ರುದ್ರೇಶ್, ಪಿಂಚಣಿ ಮತ್ತು ಸಣ್ಣ ಉಳಿತಾಯ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಆರ್.ಪರಮೇಶ್ ಹಾಗೂ ವಿವಿಧ ಬ್ಯಾಂಕ್‌ಗಳ ಮ್ಯಾನೇಜರ್‌ಗಳು ಮತ್ತು ನಿವೃತ್ತ ಸರಕಾರಿ ನೌಕರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News