'ಕಾನೂನು ಸುವ್ಯವಸ್ಥೆಗೆ ಮೊದಲ ಆದ್ಯತೆ ನೀಡುವ ಭರವಸೆ'

Update: 2019-08-24 17:27 GMT

ಭಟ್ಕಳ: ಪೊಲೀಸ್ ವರಿಷ್ಠಾಧಿಕಾರಿ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ ಶಿವಪ್ರಕಾಶ್ ದೇವರಾಜ್ ಶನಿವಾರ ಭಟ್ಕಳಕ್ಕೆ ಭೇಟಿ ನೀಡಿದ್ದು ಇಲ್ಲಿನ ನಗರ ಹಾಗೂ ಗ್ರಾಮೀಣ ಪೊಲೀಸ್ ಠಾಣೆಗಳ ಪರಿಶೀಲನೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆತೆ ಮೊದಲೆ ಆದ್ಯತೆ ನೀಡುವುದಾಗಿ ತಿಳಿಸಿದ್ದು ಸಧ್ಯ ನಮ್ಮ ಮುಂದೆ ಗಣೇಶ ಚೌತಿ ಹಾಗೂ ಮೊಹರಂ ಹಬ್ಬಗಳಿವೆ. ಎಲ್ಲರೂ ಕೂಡ ಸಂತೋಷ, ಸಡಗರದೊಂದಿಗೆ ಹಬ್ಬಗಳನ್ನು ಆಚರಿಸ ಬೇಕೆಂಬುಂದು ನಮ್ಮ ಆಪೇಕ್ಷೆಯಾಗಿದ್ದು ಯಾರಾದರೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸಕ್ಕೆ ಕೈಹಾಕಿದ್ದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾದೀತು, ಕೋಮುಗಲಭೆಗಳಿಗೆ ಇಲ್ಲಿ ಯಾವುದೇ ಆಸ್ಪದವಿರದಂತೆ ಎಚ್ಚರಿಕೆಯನ್ನು ವಹಿಸುವುದಾಗಿ ತಿಳಿಸಿದ ಅವರು ಸಮಾಜಘಾತುಕರಿಗೆ, ಅಶಾಂತಿ ವಾತವರಣ ಸೃಷ್ಟಿಸುವವರಿಗೆ ಖಡಕ್ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ.

ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಿಗೆ ಭೇಟಿ ನೀಡುತ್ತಿದ್ದು ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಲು ಯತ್ನಿಸುತ್ತಿದ್ದೇನೆ. ನಂತರವಷ್ಟೇ ಯೋಜನೆಗಳನ್ನು ರೂಪಿಸಿ ಆ ಪ್ರಕಾರ ನಡೆದುಕೊಳ್ಳಲಾಗುವುದು ಎಂದರು. 

ಈ ಸಂದರ್ಭದಲ್ಲಿ ಡಿ.ವೈ.ಎಸ್ಪಿ ವೆಲೆಂಟೇನ್ ಡಿ’ಸೋಜಾ ಹಾಗೂ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News