ಬೆಳೆ ನಷ್ಟ, ಸಾಲ ಬಾಧೆ: ರೈತ ಆತ್ಮಹತ್ಯೆಗೆ ಶರಣು

Update: 2019-08-24 18:39 GMT

ಶಿವಮೊಗ್ಗ, ಆ. 24: ಮೆಕ್ಕೆಜೋಳ ಬೆಳೆ ನಷ್ಟ ಹಾಗೂ ಸಾಲದ ಬಾಧೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ರೈತರೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಮದಗಹರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸಿದ್ದನಗೌಡ (27) ಆತ್ಮಹತ್ಯೆಗೆ ಶರಣಾದ ರೈತ ಎಂದು ಗುರುತಿಸಲಾಗಿದೆ. ಇವರಿಗೆ ಎರಡು ಎಕರೆ ಕೃಷಿ ಜಮೀನಿದ್ದು ಮೆಕ್ಕೆಜೋಳ ಬೆಳೆಯಲು ಖಾಸಗಿಯಾಗಿ ಸಾಲ ಮಾಡಿಕೊಂಡಿದ್ದರು. ಈ ವರ್ಷ ಅತೀಯಾದ ಮಳೆ ಬಂದು ಮೆಕ್ಕೆಜೋಳ ಬೆಳೆ ಹಾಳಾಗಿದ್ದರಿಂದ, ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News