ಬಡಗಬೆಟ್ಟು ಸೊಸೈಟಿ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ

Update: 2019-08-25 12:50 GMT

ಉಡುಪಿ, ಆ.25: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಸಂಜೀವ ಕಾಂಚನ್ ಅಧ್ಯಕ್ಷತೆಯಲ್ಲಿ ರವಿವಾರ ಉಡುಪಿಯ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಭವನ ದಲ್ಲಿ ಜರಗಿತು.

ಸಂಘದ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ವಾರ್ಷಿಕ ವರದಿ ಮತ್ತು ಪರಿಶೋಧಿತ ಲೆಕ್ಕಪತ್ರಗಳನ್ನು ಮಂಡಿಸಿದರು. ವರದಿ ಸಾಲಿನ ಅಂತ್ಯಕ್ಕೆ ಸಂಘವು ಒಟ್ಟು 27,687 ಸದಸ್ಯರಿಂದ 4.12 ಕೋಟಿ ರೂ. ಪಾಲು ಬಂಡ ವಾಳ ಹಾಗೂ 300.88ಕೋಟಿ ರೂ. ಠೇವಣಿ ಸಂಗ್ರಹಿಸಿದ್ದು, 267.51 ಕೋಟಿ ರೂ. ಹೊರಬಾಕಿ ಸಾಲ ಇದೆ. ವರದಿ ಸಾಲಿನಲ್ಲಿ ಸಂಘವು 6 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸ ಲಾಗಿದೆ ಎಂದು ಅವರು ತಿಳಿಸಿದರು.

ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್.ಬಿ.ನಾಯಕ್ ಮಾತನಾಡಿದರು. ಈ ಸಂದರ್ಭದಲ್ಲಿ ಸಿಎ ಪರೀಕ್ಷೆ ಯಲ್ಲಿ ಉತ್ತೀರ್ಣರಾದ ಸಾಕ್ಷಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಕುಂದಾಪುರ ಉಪವಿಭಾಗ ಸಹಾಯಕ ನಿಬಂಧಕಿ ಚಂದ್ರಪ್ರತಿಮಾ, ಸಂಘದ ಆಡಳಿತ ಮಂಡಳಿ ಸದಸ್ಯರಾದ ಪುರುಷೋತ್ತಮ ಶೆಟ್ಟಿ. ಹಾಜಿ ಸಯ್ಯದ್ ಅಬ್ದುಲ್ ರಜಾಕ್, ವಸಂತ ಕೆ.ಕಾಮತ್, ವಿನಯ ಕುಮಾರ್ ಟಿ.ಎ., ಜಯಾನಂದ ಸಿ ಮೈಂದನ್, ಪದ್ಮನಾಭ ಕೆ.ನಾಯಕ್, ರಘುರಾಮ ಎಸ್.ಶೆಟ್ಟಿ, ಜಾರ್ಜ್ ಸ್ಯಾಮ್ಯ್‌ವೆಲ್, ಸದಾಶಿವ ನಾಯ್ಕ್, ಜಯ ಶೆಟ್ಟಿ, ಗಾಯತ್ರಿ ಭಟ್ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಎಲ್. ಉಮಾನಾಥ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News