ವಿದ್ಯಾಪೋಷಕ್ ವಿನಮ್ರ ಸಹಾಯ ಕಾರ್ಯಕ್ರಮ ಉದ್ಘಾಟನೆ

Update: 2019-08-25 12:51 GMT

 ಉಡುಪಿ, ಆ.25: ಉಡುಪಿ ಯಕ್ಷಗಾನ ಕಲಾರಂಗದ ಅಂಗಸಂಸ್ಥೆಯಾದ ವಿದ್ಯಾಪೋಷಕ್‌ನ ಹದಿನೈದನೇ ವರ್ಷದ ವಿನಮ್ರ ಸಹಾಯ ಕಾರ್ಯಕ್ರಮವು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ರವಿವಾರ ಜರಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಅದಮಾರು ಕಿರಿಯ ಯತಿ ಶ್ರೀಈಶ ಪ್ರಿಯತೀರ್ಥ ಸ್ವಾಮೀಜಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿ ತನ್ನನ್ನು ಬೆಳೆಸಿದ ಸಮಾಜಕ್ಕೆ ಕೊಡುಗೆ ನೀಡಬೇಕು. ಈ ಮನೋಭಾವನೆ ವಿದ್ಯಾರ್ಥಿಗಳಲ್ಲಿ ಮೂಡಿದಾಗ ಸಮಾಜ ಬೆಳೆಯಲು ಸಾಧ್ಯವಾಗುತ್ತದೆ. ಕೇವಲ ಸಂಪತ್ತು ಗಳಿಕೆಯೇ ವಿದ್ಯಾರ್ಥಿಗಳ ಜೀವನದ ಗುರಿ ಆಗಬಾರದು ಎಂದರು.

ಅಧ್ಯಕ್ಷತೆಯನ್ನು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ. ವಿಜಯ ಬಲ್ಲಾಳ ವಹಿಸಿದ್ದರು. ಅಶ್ವಿನಿ ಹೆನ್ನಾಬೇರ್ ಹೆಸರಿನಲ್ಲಿ ನೀಡುವ ಅತ್ಯುತ್ತಮ ಪತ್ರ ಮತ್ತು ಯು. ಉಪೇಂದ್ರ ಹೆಸರಿನಲ್ಲಿ ನೀಡುವ ಅತ್ಯುತ್ತಮ ಕಡತ ನಿರ್ವಹಣೆಗೆ ನೀಡುವ ಪ್ರಮಾಣ ಪತ್ರವನ್ನು ವಿದ್ಯಾರ್ಥಿಗಳಿಗೆ ವಿತರಿಸ ಲಾಯಿತು. ಮಯ್ಯಾಸ್ ಸಂಸ್ಥೆಯ ಸಂಸ್ಥಾಪಕ ಡಾ.ಪಿ.ಸದಾನಂದ ಮಯ್ಯ ವಿಶೇಷ ಉಪನ್ಯಾಸ ನೀಡಿದರು.

 ಸಿಂಡಿಕೇಟ್ ಬ್ಯಾಂಕ್‌ನ ಜಿ.ಎಂ ಭಾಸ್ಕರ ಹಂದೆ, ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಿ.ಎಸ್. ಚಂದ್ರಶೇಖರ್, ಹುಬ್ಬಳ್ಳಿ ಮೈಲೈಪ್ ಸಂಸ್ಥೆಯ ಪ್ರವೀಣ್ ಗುಡಿ, ಲೆಕ್ಕಪರಿಶೋಧಕರಾದ ಸಿಎ ಗಣೇಶ್ ಕಾಂಚನ್ ಉಪಸ್ಥಿತರಿದ್ದರು.

ಕಲಾರಂಗದ ಉಪಾಧ್ಯಕ್ಷ ಎಸ್.ವಿ.ಭಟ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷ ಗಣೇಶ್ ರಾವ್ ಕಾರ್ಯಕ್ರಮ ನಿರೂಪಿಸಿದರು. ಕೆ.ಮನೋಹರ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News