Breaking News: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ ಶಿಪ್: ಭಾರತದ ಸಿಂಧು ಚಾಂಪಿಯನ್

Update: 2019-08-25 13:10 GMT

ಬಾಸೆಲ್(ಸ್ವಿಟ್ಝರ್ಲೆಂಡ್), ಆ.25: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಪಿ.ವಿ. ಸಿಂಧು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ರವಿವಾರ ನಡೆದ ಫೈನಲ್‌ನಲ್ಲಿ ಜಪಾನ್‌ನ ನೊರೊಮಿ ಒಕುಹರಾ ಅವರನ್ನು 21-7, 21-7 ಗೇಮ್‌ಗಳ ಅಂತರದಿಂದ ಮಣಿಸಿ ಚೊಚ್ಚಲ ಪ್ರಶಸ್ತಿ ಜಯಿಸಿದರು.

ಸತತ ಎರಡು ಬಾರಿ ಫೈನಲ್‌ಗೆ ತಲುಪಿದ್ದ ಸಿಂಧು ಬೆಳ್ಳಿಗೆ ತೃಪ್ತಿಪಟ್ಟಿದ್ದರು. ಈ ಬಾರಿ ಪ್ರಶಸ್ತಿ ಜಯಿಸಲು ಯಶಸ್ವಿಯಾಗಿದ್ದಾರೆ. ಪ್ರತಿಷ್ಠಿತ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಸಿಂಧು ಜಯಿಸಿರುವ ಐದನೇ ಪದಕ ಇದಾಗಿದೆ. ಈ ಹಿಂದೆ ತಲಾ 2 ಬೆಳ್ಳಿ ಹಾಗೂ ಕಂಚು ಜಯಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News