ಕೆಪಿಎಸ್‌ಸಿ: ಪರೀಕ್ಷಾ ಫಲಿತಾಂಶ ಪ್ರಕಟ

Update: 2019-08-25 15:30 GMT

ಬೆಂಗಳೂರು, ಆ.25: ಕರ್ನಾಟಕ ಲೋಕಸೇವಾ ಆಯೋಗ 2018 ನೆ ಸಾಲಿನಲ್ಲಿ ನಡೆಸಿದ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಫಲಿತಾಂಶವನ್ನು ವೆಬ್‌ಸೈಟ್ http://kpsc.kar.nic.in ನಲ್ಲಿ ನೋಡಬಹುದಾಗಿದೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಅಭ್ಯರ್ಥಿಗಳು ಅಂಕಗಳ ಮರು ಎಣಿಕೆಗೆ ಫಲಿತಾಂಶ ಪ್ರಕಟವಾದ 30 ದಿನಗಳೊಳಗೆ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಬೇಕು. ಮರು ಎಣಿಕೆಗೆ ಅರ್ಜಿಯನ್ನು ಕರ್ನಾಟಕ ಲೋಕಸೇವಾ ಆಯೋಗದ ಕಚೇರಿ, ಉದ್ಯೋಗ ಸೌಧ, ಬೆಂಗಳೂರು-01 ಇಲ್ಲಿಗೆ ಸಲ್ಲಿಸಬೇಕುಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News