ಅವಧಿ ಮೀರಿದ ಮದ್ಯ ಸರಬರಾಜು: ಆರೋಪಿ ಬಂಧನ

Update: 2019-08-25 15:31 GMT

ಬೆಂಗಳೂರು, ಆ.25: ಖಾಸಗಿ ಹೊಟೇಲ್‌ಯೊಂದಕ್ಕೆ ಕಾನೂನು ಬಾಹಿರವಾಗಿ ಅವಧಿ ಮುಗಿದ ಮದ್ಯ ಸರಬರಾಜು ಮಾಡುತ್ತಿದ್ದ ಆರೋಪದಡಿ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಬ್ಯಾಡರಹಳ್ಳಿ ನಿವಾಸಿ ಥಾಂಬೆ ಡ್ಯಾನಿಯಲ್(30)ಬಂಧಿತ ಆರೋಪಿಯಾಗಿದ್ದು, ಈತ ಮೂಲತಃ ಕ್ಯಾಮರೂನ್ ದೇಶದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ

ಇಸ್ಕಾನ್ ಟೆಂಪಲ್ ಹತ್ತಿರದ ಹೊಟೇಲ್‌ನ 6ನೆ ಮಹಡಿಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಅಬಕಾರಿ ನಿಯಮಾವಳಿಗಳನ್ನು ಉಲ್ಲಂಘಿಸಿ, ಸಾರ್ವಜನಿಕರಿಗೆ ಮಧ್ಯ ಹಾಗೂ ಊಟ ತಿಂಡಿಗಳ ಜೊತೆ ಮಾದಕ ವಸ್ತುಗಳನ್ನು ಕೂಡ ಗ್ರಾಹಕರಿಗೆ ಸರಬರಾಜು ಮಾಡುತ್ತಾ ಅಕ್ರಮವಾಗಿ ಹಣ ಸಂಪಾದನೆ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ದಾಳಿ ವೇಳೆ, ಬಾರ್ ನಲ್ಲಿ ಡಿಜೆ ಆಗಿ ಕೆಲಸ ಮಾಡುತ್ತಿದ್ದ ಓರ್ವನನ್ನು ವಶಕ್ಕೆ ಪಡೆಯಲಾಗಿದ್ದು, ನಗದು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾರ್ ಮಾಲಕ ಸೇರಿದಂತೆ ಇಬ್ಬರು ತಲೆಮರೆಸಿಕೊಂಡಿದ್ದು, ಇವರ ಪತ್ತೆಗೆ ಶೋಧ ಕಾರ್ಯ ಮುಂದುವರಿದೆ ಎಂದು ಸಿಸಿಬಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News