ಶಿಕ್ಷಕನಿಂದ ಅತ್ಯಾಚಾರ: 12 ವರ್ಷದ ವಿದ್ಯಾರ್ಥಿನಿ ಗರ್ಭಿಣಿ

Update: 2019-08-25 15:57 GMT

ತಿರುವನಂತಪುರಂ, ಆ.25: ಶಾಲೆಯ ಶಿಕ್ಷಕನಿಂದಲೇ ಅತ್ಯಾಚಾರಕ್ಕೆ ಒಳಗಾದ 7ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿದ್ದು, ಆರೋಪಿ ಶಿಕ್ಷಕ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ. ಉತ್ತರ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಶಿಕ್ಷಕ ಎರಡು ತಿಂಗಳಿನಿಂದ ಬಾಲಕಿಯ ಮೇಲೆ ಅತ್ಯಾಚಾರ ಎಸಗುತ್ತಿದ್ದ. ಆದರೆ ಬಾಲಕಿ ಈ ವಿಷಯವನ್ನು ಮನೆಯವರ ಸಹಿತ ಯಾರಲ್ಲೂ ಹೇಳಿರಲಿಲ್ಲ. ಇತ್ತೀಚೆಗೆ ಶಾಲೆಯಲ್ಲಿ ನಡೆದ ಆಪ್ತ ಸಮಾಲೋಚನೆ ಕಾರ್ಯಕ್ರಮದಲ್ಲಿ ಬಾಲಕಿ ಈ ಬಗ್ಗೆ ಬಾಯಿಬಿಟ್ಟಿದ್ದಾಳೆ.

ತಕ್ಷಣ ಆಕೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಪೊಲೀಸರಿಗೆ ದೂರು ನೀಡಲಾಗಿದ್ದು ನಾಪತ್ತೆಯಾಗಿರುವ ಶಿಕ್ಷಕನ ವಿರುದ್ಧ ಅತ್ಯಾಚಾರ ಮತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News