ಅಂಜುಮನ್ : ಎರಡು ದಿನಗಳ ಪೌರತ್ವ ತರಬೇತಿ ಶಿಬಿರ

Update: 2019-08-25 17:38 GMT

ಭಟ್ಕಳ: ಇಲ್ಲಿನ ಅಂಜುಮನ್ ಹಾಮಿಯೇ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಬಿ.ಇಡಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಎರಡು ದಿನಗಳ ಪೌರತ್ವ ಶಿಬಿರ ರವಿವಾರದಿಂದ ಆರಂಭಗೊಂಡಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಟ್ಕಳ ಡಿ.ವೈ.ಎಸ್ಪಿ ವ್ಯಾಲೆಂಟೇನ್ ಡಿ’ಸೋಜಾ ವಿದ್ಯಾರ್ಥಿಗಳನ್ನು ಉದ್ದೇಶಿ ಮಾತನಾಡಿ, ಮನಸ್ಸಿನ ಭಯವನ್ನು ತೆಗೆದು ಹಾಕಬೇಕು ಭಯದಿಂದಾಗಿಯೇ ವಿದ್ಯಾರ್ಥಿಗಳು ಆತ್ಮಹತ್ಯೆಯಂತ ಕೃತ್ಯಗಳಿಗೆ ಇಳಿಯುತ್ತಾರೆ ಎಂದ ಅವರು ಶಿಕ್ಷಕರು ವಿದ್ಯಾರ್ಥಿಗಳಲ್ಲಿನ ಪ್ರತಿಭೆಗಳನ್ನು ಹೆಕ್ಕಿ ತೆಗೆಯಲು ಸಹಾಯಕರಾಗಬೇಕು, ಅವರಲ್ಲಿ ಆತ್ಮವಿಶ್ವಾಸವನ್ನು ತುಂಬುವಂತಹ ಕಾರ್ಯ ಶಿಕ್ಷಕರಿಂದ ಆಗಬೇಕು ಎಂದರು.

ಗೌರವ ಅತಿಥಿಯಾಗಿ ಉಪಸ್ಥಿತರಿದ್ದ ಅಬ್ದುಲ್ ರಹಮಾನ್ ಸಿದ್ದೀಖ್, ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳಿದ್ದು ಪ್ರತಿದಿನ ಹೊಸದನ್ನು ಕಲಿತು ಮುಂದಿನ ಸವಾಲುಗಳನ್ನು ಎದುರಿಸಲು ಸಿದ್ದರಾಬೇಕು. ಸೃಜಶೀಲತೆಯನ್ನು ಮೈಗೂಡಿಸಿಕೊಳ್ಳುವುದರ ಮೂಲಕ ಉತ್ತಮ ನಾಯಕತ್ವ ಗುಣ ಹೊಂದಬೇಕು. ಈ ಮೂಲಕ ಉತ್ತಮ ನಾಗರೀಕರಾಗಿ ಜೀವಿಸಬೇಕು ಎಂದು ಅವರು ಕರೆ ನೀಡಿದರು.

ಅಂಜುಮನ್ ಶಿಕ್ಷಣ ಸಂಸ್ಥೇಯ ಅಧ್ಯಕ್ಷ ಅಬ್ದುಲ್ ರಹೀಮ್ ಜುಕಾಕೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲೆ ಡಾ.ಝಕಿಯಾ ಝರ್ಝರಿ ಪ್ರಸ್ತಾವಿಕವಾಗಿ ಮಾತನಾಡಿ ಶಿಬಿರ ಉದ್ದೇಶಗಳನ್ನು ಮುಂದಿಟ್ಟರು. ಮುಸರ್ರತ್ ತಾಜ್ ಸ್ವಾಗತಿಸಿದರು. ಅಸೀಮಾ ಫೈಝಾನ್ ಅತಿಥಿಗಳನ್ನು ಪರಿಚಯಿಸಿದರು. ಸಬಾ ಶೇಖ್ ಧನ್ಯವಾದ ಅರ್ಪಿಸಿದರು.

ವೇದಿಕೆಯಲ್ಲಿ ಅಂಜುಮನ್ ಹಾಮಿಯೇ ಮುಸ್ಲಿಮೀನ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಸಿದ್ದಿಖ್ ಹೆಚ್ಚುವರಿ ಪ್ರ.ಕಾ. ಇಸಾಖ್ ಶಾಬಂದ್ರಿ, ಕಾಲೇಜು ಬೋರ್ಡ್ ಕಾರ್ಯದರ್ಶಿ ಆಫ್ತಾಬ್ ಖಮ್ರಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News