ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ಗೆ ನೀಡಿರುವ ವಿಶೇಷ ಭದ್ರತೆ ಹಿಂಪಡೆದ ಕೇಂದ್ರ

Update: 2019-08-26 04:40 GMT

ಹೊಸದಿಲ್ಲಿ, ಆ.26: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರಿಗೆ ನೀಡಲಾಗಿದ್ದ ಉನ್ನತ ವಿಶೇಷ ಭದ್ರತಾ ದಳ(ಎಸ್‌ಪಿಜಿ)ಭದ್ರತೆಯನ್ನು  ಹಿಂಪಡೆಯಲಾಗಿದೆ. ಅವರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್)ಭದ್ರತೆ ನೀಡಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ.

ಎಸ್‌ಪಿಜಿ ಭದ್ರತೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಅವರ ಮಕ್ಕಳಾದ ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ಅವರಂತಹ ದೇಶದ ಅತ್ಯಂತ ಸಂರಕ್ಷಿತ ರಾಜಕಾರಣಿಗಳಿಗೆ ನೀಡಲಾಗುತ್ತದೆ.

ಮಾಜಿ ಪ್ರಧಾನಮಂತ್ರಿಗಳಾದ ಎಚ್‌.ಡಿ. ದೇವೇಗೌಡ ಹಾಗೂ ವಿ.ಪಿ.ಸಿಂಗ್ ಅವರ ಎಸ್‌ಪಿಜಿ ಭದ್ರತೆಯನ್ನು ಹಿಂಪಡೆಯಲಾಗಿತ್ತು.

ಬೆದರಿಕೆಯ ಗ್ರಹಿಕೆಯಲ್ಲಿ ಮಾಜಿ ಪ್ರಧಾನಮಂತ್ರಿಗಳು ಹಾಗೂ ಅವರ ಕುಟುಂಬದವರಿಗೆ ಎಸ್‌ಪಿಜಿ ಭದ್ರತೆ ನೀಡಲಾಗುತ್ತದೆ. ಮನಮೋಹನ್ ಸಿಂಗ್ ಪುತ್ರಿಯರು ಹಾಗೂ ಅಟಲ್‌ ಬಿಹಾರಿ ವಾಜಪೇಯಿ ಅವರ ಸಾಕು ಪುತ್ರಿ ಈಗಾಗಲೇ ಎಸ್‌ಪಿಜಿ ಭದ್ರತೆಯನ್ನು ತ್ಯಜಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News