ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

Update: 2019-08-26 05:51 GMT

ಹೊಸದಿಲ್ಲಿ, ಆ.26:ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ತಮ್ಮನ್ನು ಸ್ಪೀಕರ್ ಅನರ್ಹಗೊಳಿಸಿರುವ ವಿಚಾರವನ್ನ್ನು ತುರ್ತು ವಿಚಾರಣೆ ನಡೆಸುವಂತೆ ಆಗ್ರಹಿಸಿ ಕರ್ನಾಟಕದ ಅನರ್ಹ ಶಾಸಕರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ತಿರಸ್ಕರಿಸಿದೆ.

ಜಸ್ಟಿಸ್ ಎನ್.ವಿ. ರಮಣ ನೇತೃತ್ವದ ಸುಪ್ರೀಂಕೋರ್ಟ್ ಪೀಠ ಅರ್ಜಿಯನ್ನು ತ್ವರಿತ ವಿಚಾರಣೆ ನಡೆಸಲು ನಿರಾಕರಿಸಿರುವುದು ಅನರ್ಹ ಶಾಸಕರಿಗೆ ತೀವ್ರ ಹಿನ್ನಡೆಯಾಗಿದೆ.

 ಅನರ್ಹ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ತಮ್ಮ ಜೂನಿಯರ್‌ನ್ನು ಕಳುಹಿಸಿ ಅರ್ಜಿ ಮೆನ್ಶನ್ ಮಾಡಿಸಿದ್ದರು. ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆ ನಡೆಸುವುದಿಲ್ಲ ಎಂದು ಮೊದಲೇ ಅರಿತಿದ್ದ ರೋಹ್ಟಗಿ ತಮ್ಮ ಜೂನಿಯರ್‌ನ್ನು ಕಳುಹಿಸಿದ್ದರು ಎಂದು ತಿಳಿದುಬಂದಿದೆ.

ಬಿಎಸ್ ಯಡಿಯೂರಪ್ಪ ಸರಕಾರದಲ್ಲಿ ಸಚಿವ ಸ್ಥಾನ ಮೇಲೆ ಕಣ್ಣಿಟ್ಟಿದ್ದ ರಮೇಶ್ ಜಾರಕಿಹೊಳಿ, ಬಿಸಿ ಪಾಟೀಲ್ ಸಹಿತ ಹಲವರಿಗೆ ಸುಪ್ರೀಂಕೋರ್ಟ್ ತೀರ್ಪು ನಿರಾಸೆ ತಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News