×
Ad

ಬಂಟ್ವಾಳ : ಜಮೀಯತುಲ್ ಫಲಾಹ್ ಅಧ್ಯಕ್ಷರಾಗಿ ಹಾಜಿ ಎ. ಉಸ್ಮಾನ್ ಕರೋಪಾಡಿ ಆಯ್ಕೆ

Update: 2019-08-26 15:43 IST

ವಿಟ್ಲ : ಜಮೀಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಹಾಜಿ ಎ.ಉಸ್ಮಾನ್ ಕರೋಪಾಡಿ ಆಯ್ಕೆಯಾದರು. ಮೆಲ್ಕಾರ್ ನ ಎಂ.ಎಚ್.ಕಂಪೌಂಡ್ ನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಅಯ್ಕೆ ನಡೆಯಿತು. 

ಉಪಾಧ್ಯಕ್ಷರಾಗಿ ಬಿ.ಎಂ.ಅಬ್ಬಾಸ್ ಅಲಿ, ರಶೀದ್ ವಿಟ್ಲ, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಎಚ್.ಇಕ್ಬಾಲ್ ಮೆಲ್ಕಾರ್, ಕಾರ್ಯದರ್ಶಿಯಾಗಿ ಅಬ್ದುಲ್ ರಝಾಕ್ ಮಾಸ್ಟರ್ ಅನಂತಾಡಿ, ಕೋಶಾಧಿಕಾರಿಯಾಗಿ ಎಫ್.ಎಂ.ಬಶೀರ್ ಫರಂಗಿಪೇಟೆ, ಸಂಘಟನಾ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ನೇರಳಕಟ್ಟೆ, ಪತ್ರಿಕಾ ಕಾರ್ಯದರ್ಶಿಯಾಗಿ ಸುಲೈಮಾನ್ ಸೂರಿಕುಮೇರು ಅವಿರೋಧವಾಗಿ ಆಯ್ಕೆಯಾದರು ಹಾಗೂ 13 ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ನೇಮಿಸಲಾಯಿತು.

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕಾದ್ಯಕ್ಷ ಆಲಿಯಬ್ಬ ಪೊಲಾಬೆ ವೀಕ್ಷಕರಾಗಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಮೆನೇಜರ್ ಆದಂ ಹಾಜಿ ಸಹಕರಿಸಿದರು.

ಬಂಟ್ವಾಳ ಘಟಕಾದ್ಯಕ್ಷ ಆಸಿಫ್ ಇಕ್ಬಾಲ್ ಫರಂಗಿಪೇಟೆ ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಕೆ.ಕೆ.ಸಾಹುಲ್ ಹಮೀದ್ ವರದಿ ವಾಚಿಸಿದರು, ಕೋಶಾಧಿಕಾರಿ ಎಂ.ಎಚ್.ಇಕ್ಬಾಲ್ ಲೆಕ್ಕಪತ್ರ ಮಂಡಿಸಿದರು. ರಝಾಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News