ದೇವಸ್ಥಾನದಲ್ಲಿ ಸ್ಫೋಟ: ಓರ್ವ ಮೃತ್ಯು; ನಾಲ್ವರಿಗೆ ಗಾಯ

Update: 2019-08-26 10:23 GMT

ತಿರುಪೊರೂರು, ಆ.26: ಇಲ್ಲಿನ ಗಂಗೈ ಅಮ್ಮನ್ ದೇವಸ್ಥಾನದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಮೃತಪಟ್ಟಿದ್ದು, 4 ನಾಲ್ವರು ಗಾಯಗೊಂಡಿದ್ದಾರೆ.

ಸ್ಫೋಟದ ಶಬ್ಧ ಕೇಳಿ ಸ್ಥಳೀಯರು ಬೆಚ್ಚಿಬಿದ್ದಿದ್ದು ದೇವಸ್ಥಾನದ ಸಮೀಪ ಜಮಾಯಿಸಿದ್ದಾರೆ. ಸ್ಫೋಟದ ತೀವ್ರತೆಗೆ ದೇವಸ್ಥಾನದ ಕಾಂಪೌಂಡ್ ಗೋಡೆಗೆ ಮತ್ತು ಸಮೀಪದ ಕಟ್ಟಡಕ್ಕೆ ಹಾನಿಯಾಗಿದೆ.

ದೇವಸ್ಥಾನದಲ್ಲಿ ಸ್ಫೋಟಗೊಂಡದ್ದು ನಾಡಬಾಂಬ್ ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News