ಐಎಂಎ ವಂಚನೆ ಪ್ರಕರಣ: ಕಡತ ಸಿಬಿಐಗೆ ವರ್ಗಾವಣೆ ?

Update: 2019-08-26 12:55 GMT

ಬೆಂಗಳೂರು, ಆ.26: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಕಡತಗಳನ್ನೂ ಸಿಬಿಐಗೆ ವರ್ಗಾವಣೆ ಮಾಡಲು ಸಿಟ್ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಎರಡು ದಿನಗಳ ಹಿಂದೆ ಸಿಬಿಐ ಅಧಿಕಾರಿಗಳು ಸಿಟ್ ಅಧಿಕಾರಿಗಳನ್ನು ಸಂಪರ್ಕಿಸಿ, ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದು, ಈ ಮೊದಲು ತನಿಖೆ ನಡೆಸಿದ್ದ ಸಿಟ್ ಕಚೇರಿಯಿಂದ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಸಿಬಿಐ ಅಧಿಕಾರಿಗಳು ಪಡೆದುಕೊಂಡಿದ್ದು, ಸದ್ಯದಲ್ಲೇ ಮನ್ಸೂರ್ ಖಾನ್‌ನನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಎರಡು ಸ್ಟಂಟ್ ಅಳವಡಿಕೆ: ವಂಚನೆ ಪ್ರಕರಣ ಪ್ರಮುಖ ಆರೋಪಿ ಮನ್ಸೂರ್ ಖಾನ್, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಅವರ ಹೃದಯ ಭಾಗಕ್ಕೆ ಎರಡು ಸ್ಟಂಟ್ ಅಳವಡಿಸಿ ಚಿಕಿತ್ಸೆ ನೀಡಿದ ಬಳಿಕ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿ ಇಡಲಾಗಿದೆ ಎನ್ನಲಾಗಿದೆ

ಸಿಟ್ ಕಸ್ಟಡಿ ಅವಧಿ ಅಂತ್ಯವಾಗಿರುವ ಹಿನ್ನೆಲೆ ನ್ಯಾಯಾಲಯ ಮನ್ಸೂರ್ ಖಾನ್‌ನನ್ನು ಜೈಲಿಗೆ ಕಳುಹಿಸಿತ್ತು. ಆದರೆ, ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆ ಜೈಲಾಧಿಕಾರಿಗಳು ಆತನನ್ನು ಜಯದೇವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News