ಸೆಲ್ಫಿ ಕ್ಲಿಕ್ಕಿಸಿ ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ

Update: 2019-08-26 15:33 GMT

ಮೈಸೂರು,ಆ.26: ಸಾಯುವುದಕ್ಕೂ ಮುನ್ನ ತಾಯಿ ಮಗಳು ಸೆಲ್ಫಿ ತೆಗೆದುಕೊಂಡು ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ಮೈಸೂರಿನ ಬಂಡಿಪಾಳ್ಯದ ನಿವಾಸಿಗಳಾದ ಮಂಜುಳಾ (38) ಮಗಳು ಸೌಮ್ಯ (19) ಎಂದು ಗುರುತಿಸಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಬಳಿ ಇರುವ ಸಂಗಮದ ಬಳಿ ಕಪಿಲಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನದಿಗೆ ಹಾರುವ ಮುನ್ನ ಸೆಲ್ಫೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಕಳೆದ ಏಳು ತಿಂಗಳ ಹಿಂದೆಯಷ್ಟೇ ಸೌಮ್ಯ ಮದುವೆಯಾಗಿದ್ದಳು, ಇವರ ಪತಿ ಕುಮಾರ ಇತ್ತೀಚೆಗಷ್ಟೇ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಇದರಿಂದ ಬೇಸರಗೊಂಡಿದ್ದ ಪತ್ನಿ ಸೌಮ್ಯ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಮಗಳ ಮೇಲೆ ಅತಿಯಾದ ಪ್ರೀತಿ ಇಟ್ಟುಕೊಂಡಿದ್ದ ತಾಯಿಯೂ ಸಹ ಒಟ್ಟಿಗೆ ಸೇರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News