ರಾಜ್ಯದಲ್ಲಿ ಮೂರು ಉಪಮುಖ್ಯಮಂತ್ರಿ ಅಗತ್ಯವಿರಲಿಲ್ಲ : ಸಂಸದ ಶ್ರೀನಿವಾಸ್ ಪ್ರಸಾದ್

Update: 2019-08-27 09:07 GMT

ಮೈಸೂರು : ರಾಜ್ಯದಲ್ಲಿ ಮೂರು ಉಪಮುಖ್ಯಮಂತ್ರಿ ಅಗತ್ಯವಿರಲಿಲ್ಲ, ಇದು ಸಂವಿಧಾನ ವಿರೋಧಿ ನಡವಳಿಕೆ ಎಂದು ಸ್ವಪಕ್ಷದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಬಿಜೆಪಿ ಹೈಕಮಾಂಡ್ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮೂರು ಉಪ ಮುಖ್ಯಮಂತ್ರಿಗಳ ಅಗತ್ಯವಿರಲಿಲ್ಲ, ನಾಲ್ಕು ವರ್ಷ ಉತ್ತಮ ಆಡಳಿತ ನಡೆಸಲು ಅನುವು ಮಾಡಿಕೊಡಬೇಕಾದ ಹೈಕಮಾಂಡ್ ನಾಯಕರು ಗೊಂದಲವನ್ನುಂಟು ಮಾಡುತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು 17 ಜನ ಅತೃಪ್ತ ಶಾಸಕರೇ ಕಾರಣ, ಅವರು ಈಗ ಅತಂತ್ರ ಸ್ಥಿತಿಯಲ್ಲಿದ್ದಾರೆ, ಅವರ ಬಗ್ಗೆ ಗಮನಕೊಟ್ಟು ಉತ್ತಮ ಆಡಳಿತ ನಡೆಸಬೇಕಿದೆ. ಆದರೆ ಸಚಿವ ಸ್ಥಾನ,  ಪ್ರಮುಖ ಖಾತೆಗಳ ಬಗ್ಗೆ ಶಾಸಕರುಗಳೇ ಕಚ್ಚಾಡುತ್ತಿರುದು ನಾಚಿಕಗೇಡು ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪ ಒಳ್ಳೆಯ ಆಡಳಿತ ಕೊಡಲಿದ್ದಾರೆ ಎಂಬ ನಂಬಿಕೆ ಇದೆ. ಮಧ್ಯಂತರ ಚುನಾವಣೆ ಎದುರಾಗುತ್ತದೆ ಎಂದು ನನಗೆ ಅನಿಸುವುದಿಲ್ಲ, ನಮ್ಮಲ್ಲಿ ಏನು ಗೊಂದಲ ಇದಿಯೋ ಅದನ್ನು ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಬಸವೇಗೌಡ, ವಿ.ಶ್ರೀನಿವಾಸಪ್ರಸಾದ್ ಅಭಿಮಾನಿಗಳ ಬಳಗದ ಅಧ್ಯಕ್ಷ ಶಿವಕುಮಾರ್, ವಿ.ರಾಮಸ್ವಾಮಿ, ಭರತ್ ರಾಮಸ್ವಾಮಿ, ರವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News