×
Ad

ಶಿರ್ವ: ತಾಲೂಕು ಮಟ್ಟದ ಪ್ರೌಢಶಾಲಾ ತ್ರೋಬಾಲ್ ಪಂದ್ಯಾಕೂಟ

Update: 2019-08-27 21:51 IST

ಶಿರ್ವ, ಆ.27: ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಿರ್ವ ಹಿಂದೂ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಪ್ರೌಢಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ತ್ರೋಬಾಲ್ ಪಂಚ್ಯಾಟವನ್ನು ಮಂಗಳವಾರ ಕಾಲೇಜಿನ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿತ್ತು.

ಪಂದ್ಯಾಟವನ್ನು ಉದ್ಘಾಟಿಸಿದ ಸ್ಟೇಟ್ ಬ್ಯಾಂಕ್ ಆ್ ಇಂಡಿಯಾ ಶಿರ್ವ ಶಾಖೆಯ ಪ್ರಬಂಧಕ ಅಭಿನಂದನ್ ಬಾಯರಿ ಮಾತನಾಡಿ, ಆಸಕ್ತರು ಕ್ರೀಡೆ ಯಲ್ಲಿ ಗಂಭೀರವಾಗಿ ತೊಡಗಿಕೊಂಡರೆ ಸಾಧನೆ ಮಾಡಿ ಕ್ರೀಡೆಯನ್ನೇ ವೃತ್ತಿ ಯನ್ನಾಗಿಸಲು ಅವಕಾಶವಿದೆ. ಅದಕ್ಕಾಗಿ ಸಾಧಕ ಕ್ರೀಡಾಪಟುಗಳನ್ನು ಸ್ಪೂರ್ತಿ ಯಾಗಿ ತೆಗೆದುಕೊಂಡು ಮುನ್ನುಗ್ಗಬೇಕು ಎಂದರು.

ಅಧ್ಯಕ್ಷತೆಯನ್ನು ವಿದ್ಯಾರ್ಧಕ ಸಂಘದ ಸಂಚಾಲಕ ಸುಬ್ಬಯ್ಯ ಹೆಗ್ಡೆ ವಹಿಸಿ ದ್ದರು. ಜಿಪಂ ಸದಸ್ಯ ವಿಲ್ಸ್ ರಾಡ್ರಿಗಸ್, ಶಿರ್ವ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ್ ಶೆಟ್ಟಿ ಮಾತನಾಡಿದರು.

ಉಡುಪಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಶ್ವನಾಥ ಬಾಯರಿ, ಎಂಎಸ್‌ಆರ್‌ಎಸ್ ಕಾಲೇಜಿನ ಉಪ ಪ್ರಾಂಶುಪಾಲ ಕೆ.ಜಿ. ಮಂಜುನಾಥ್, ವಿದ್ಯಾವರ್ಧಕ ಸೆಂಟ್ರಲ್ ಸ್ಕೂಲ್‌ನ ಪಾಂ್ರಶುಪಾಲೆ ನಿಶಾ ಶೆಟ್ಟಿ, ಹಿಂದೂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಭಾಸ್ಕರ ಎ., ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಕುತ್ಯಾರು, ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಆಲ್ವಿನ್ ಅಂದ್ರಾದೆ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ದೇವೇಂದ್ರ ಹೆಗ್ಡೆ, ಆಡಳಿತ ಮಂಡಳಿಯ ಸದಸ್ಯ ಕರುಣಾಕರ ಹೆಗ್ಡೆ ಉಪಸ್ಥಿತರಿದ್ದರು.

ಹಿಂದೂ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಶಕೀಲ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸುರೇಂದ್ರನಾಥ್ ಶೆಟ್ಟಿ ವಂದಿಸಿದರು. ಉಪನ್ಯಾಸಕರಾದ ಲಕ್ಷೀತ್ಮ ದೇವಿ ಶೆಟ್ಟಿ ಮತುತಿ ಸುಪ್ರಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News