ಪಶುಸಂಗೋಪನೆ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
Update: 2019-08-27 22:24 IST
ಉಡುಪಿ, ಆ.27: ಜಿಲ್ಲೆಯ ಅಲೆಮಾರಿ, ಮೂಲನಿವಾಸಿ ಮತ್ತು ಅರಣ್ಯ ಅವಲಂಬಿತ ಜನಾಂಗದವರಿಗೆ ಪಶುಸಂಗೋಪನೆ ಕಾರ್ಯಕ್ರಮಗಳಾದ ಹೈನುಗಾರಿಕೆ, ಹಸು, ಎಮ್ಮೆ, ಕುರಿ ಮೇಕೆ, ಸರಕು ಸಾಗಾಣಿಕೆ ವಾಹನ, ಮೊಲ ಸಾಕಾಣಿಕೆ, ಹಂದಿ ಸಾಕಾಣಿಕೆ ಇತ್ಯಾದಿ ಸ್ವಯಂ ಉದ್ಯೋಗ ಕಾರ್ಯಕ್ರಮ ಅನುಷ್ಟಾನ ಮಾಡುತ್ತಿದ್ದು, ಆಸಕ್ತಿಯುಳ್ಳ ಅಲೆಮಾರಿ, ಮೂಲನಿವಾಸಿ ಮತ್ತು ಅರಣ್ಯ ಅವಲಂಬಿತ ಜನಾಂಗದವರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ರಜತಾದ್ರಿ, ಮಣಿಪಾಲ ಇಲ್ಲಿ ಹಾಗೂ ಸಂಬಂಧಪಟ್ಟ ಗ್ರಾಪಂಗಳಲ್ಲಿ ಸೆ.3ರಿಂದ ಪಡೆಯಬಹುದು. ಅರ್ಜಿ ಸಲ್ಲಿಸಲು ಸೆ.26 ಕೊನೆಯ ದಿನವಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಐಟಿಡಿಪಿ ಉಡುಪಿ ಕಚೇರಿ, ದೂರವಾಣಿ ಸಂಖ್ಯೆ: 0820-2574814ನ್ನು ಸಂಪರ್ಕಿಸುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.