×
Ad

ನೈಸರ್ಗಿಕ ವಿಪತ್ತು ಪರಾಮರ್ಶೆಗೆ ಸಚಿವ ಸಂಪುಟ ಉಪಸಮಿತಿ ರಚನೆ

Update: 2019-08-27 22:52 IST
ಸಚಿವ ಆರ್. ಅಶೋಕ್

ಬೆಂಗಳೂರು, ಆ. 27: ರಾಜ್ಯದಲ್ಲಿನ ಬರ, ಪ್ರವಾಹ ಪರಿಸ್ಥಿತಿ ಹಾಗೂ ಇತರ ನೈಸರ್ಗಿಕ ವಿಪತ್ತುಗಳಿಂದ ಸಂಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಲು ಕಂದಾಯ ಸಚಿವ ಆರ್. ಅಶೋಕ್ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ವಸತಿ ಸಚಿವ ವಿ.ಸೋಮಣ್ಣ, ಕಾನೂನು, ಸಂಸದೀಯ ವ್ಯವಹಾರ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ, ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಸಚಿವರಾದ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ಈ ಸಮಿತಿಯ ಸದಸ್ಯರಾಗಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News