×
Ad

ನ್ಯಾಯಾಧೀಕರಣ ತೀರ್ಪುಗಳ ಅನುಷ್ಠಾನದ ಪರಿಶೀಲನೆಗೆ ಸಂಪುಟ ಉಪ ಸಮಿತಿ ರಚನೆ

Update: 2019-08-27 22:57 IST

ಬೆಂಗಳೂರು, ಆ.27: ಕೃಷ್ಣಾ, ಕಾವೇರಿ, ಮಹಾದಾಯಿ ಹಾಗೂ ಇತರೆ ನೀರಾವರಿ ಯೋಜನೆಗಳ ಅನುಷ್ಠಾನ, ನ್ಯಾಯಾಧೀಕರಣಗಳ ತೀರ್ಪುಗಳ ಅನುಷ್ಠಾನದ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಉಪ ಸಮಿತಿಯ ಸದಸ್ಯರಾಗಿರುತ್ತಾರೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಂಪುಟ ಉಪ ಸಮಿತಿ ರಚನೆ ಸಂಬಂಧ ತೀರ್ಮಾನ ಕೈಗೊಳ್ಳಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News