ಇಂದು ಸುಪ್ರೀಂನಲ್ಲಿ 370ನೇ ವಿಧಿ ರದ್ದುಪಡಿಸಿರುವುದಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ

Update: 2019-08-28 05:20 GMT

 ಹೊಸದಿಲ್ಲಿ, ಆ.28: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ 370 ನೇ ವಿಧಿಯನ್ನು ರದ್ದುಪಡಿಸುವುದಕ್ಕೆ ಸಂಬಂಧಿಸಿದ ಸುಮಾರು 10 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

 ಈ ಅರ್ಜಿಗಳಲ್ಲಿ ಹೆಚ್ಚಿನವು ಆರ್ಟಿಕಲ್ 370 ಅನ್ನು ದುರ್ಬಲಗೊಳಿಸುವ ಮತ್ತು ಆರ್ಟಿಕಲ್ 35 ಎ ಅನ್ನು ಹಿಂತೆಗೆದುಕೊಳ್ಳುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿದರೆ, ಉಳಿದ ಅರ್ಜಿಗಳು  ಕರ್ಫ್ಯೂ ಹೇರಿರುವುದು ಮತ್ತು ಈ ಪ್ರದೇಶದಲ್ಲಿ ಅದರ ಪರಿಣಾಮಕ್ಕೆ ಸಂಬಂಧಿಸಿದ್ದಾಗಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠದ ಮುಂದೆ ಸಲ್ಲಿಸಿದ ಮನವಿಯಲ್ಲಿ ಸಿಪಿಐಎಂ ನಾಯಕ ಸೀತಾರಾಮ್ ಯೆಚೂರಿ ಅವರು ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಒಳಗೊಂಡಿದ್ದು, ಇದರಲ್ಲಿ ಅವರು ಕಾಶ್ಮೀರ ರಾಜಕಾರಣಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಯೂಸುಫ್ ತಾರಿಗಾಮಿಯನ್ನು ಬಂಧಿಸುವುದನ್ನು ಪ್ರಶ್ನಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ತೆಹ್ಸೀನ್ ಪೂನಾವಾಲ ತನ್ನ ಅರ್ಜಿಯಲ್ಲಿ ಈ ಪ್ರದೇಶದಲ್ಲಿ ಸಂವಿಧಾನದ ಆರ್ಟಿಕಲ್ 19 (ವಾಕ್ ಸ್ವಾತಂತ್ರ್ಯ) ಮತ್ತು 21 (ವೈಯಕ್ತಿಕ ಸ್ವಾತಂತ್ರ್ಯ) ನಿಷೇಧ ವಿಧಿಸಿರುವುದನ್ನು  ಪ್ರಶ್ನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News