×
Ad

ರಾಜ್ಯದ ಇಬ್ಬರು ಶಿಕ್ಷಕರಿಗೆ ರಾಷ್ಟ್ರಪ್ರಶಸ್ತಿ

Update: 2019-08-28 21:52 IST

ಬೆಂಗಳೂರು, ಆ.28: ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಇಲಾಖೆ ವತಿಯಿಂದ ಪ್ರತಿ ವರ್ಷ ಸೆ.5ರಂದು ಶಿಕ್ಷಕರ ದಿನಾಚರಣೆ ಪ್ರಯುಕ್ತ ನೀಡುವ 2018ನೇ ಸಾಲಿನ ರಾಷ್ಟ್ರಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟವಾಗಿದ್ದು, ರಾಜ್ಯದ ಇಬ್ಬರು ಶಿಕ್ಷಕರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಲೆಕ್ಯಾತನಹಳ್ಳಿಯ ಸರಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ಶಶಿಕುಮಾರ್ ಬಿ.ಎಸ್. ಹಾಗೂ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಬೆಸೂರು ಸರಕಾರಿ ಪ್ರೌಢ ಶಾಲೆಯ ಶಿಕ್ಷಕ ಸುರೇಶ್ ಮರಕಾಲರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News