ಮಂಡ್ಯ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ- ವಸತಿ ಶಾಲೆ ನಿಲಯ ಪಾಲಕಿ ಅಮಾನತು

Update: 2019-08-28 17:49 GMT

ಮಂಡ್ಯ, ಆ.28: ಪಾಂಡವಪುರ ತಾಲೂಕು ಕೆರೆ ತೊಣ್ಣೂರು ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿನಿ ಎ.ಜಿ.ರಕ್ಷಿತಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆ ನಿಲಯಪಾಲಕಿ ಸಿ.ಪುಷ್ಪಲತಾ ಅವರನ್ನು ಸೇವೆಯಿಂದ ಅಮಾನತುಪಡಿಸಲಾಗಿದೆ.

ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ವಾಸ್ತವ್ಯಕ್ಕೆ ಉತ್ತಮವಾದ ವಾತಾವರಣವನ್ನು ಸೃಷ್ಠಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕ್ರಮಕೈಗೊಳ್ಳದೆ ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಪುಷ್ಪಲತಾ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದ್ದಾರೆ.

ಕೆ.ಆರ್.ಪೇಟೆ ತಾಲೂಕು ಆಲೇನಹಳ್ಳಿಯ 10ನೇ ತರಗತಿ ವಿದ್ಯಾರ್ಥಿನಿ ರಕ್ಷಿತ ವಸತಿ ಶಾಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದು ಆತ್ಮಹತ್ಯೆಯಲ್ಲ, ಕೊಲೆ. ಇದಕ್ಕೆ ನಿಲಯ ಪಾಲಕಿ ಪುಷ್ಪಲತ ಕಾರಣವೆಂದು ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಪ್ರತಿಭಟನೆ ಕೂಡ ನಡೆದಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News