ಹನೂರು: ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಗ್ರಾಮ ಸಭೆ

Update: 2019-08-28 18:02 GMT

ಹನೂರು, ಆ.28: ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅದನ್ನು ಬಗಿಹರಿಸುವ ನಿಟ್ಟಿನಲ್ಲಿ ತುರ್ತು ಕ್ರಮಕೈಗೊಳ್ಳುವಂತೆ ಗ್ರಾಮಸ್ಥರು ಸಭೆಯಲ್ಲಿ ಆಗ್ರಹಿಸಿದರು.

ಹನೂರು ಕ್ಷೇತ್ರ ವ್ಯಾಪ್ತಿಯ ಕೂಂಗರಹಳ್ಳಿ ಗ್ರಾಮ ಪಂಚಾಯತ್ ಆವರಣದಲ್ಲಿ ಆಯೋಜಿಸಲಾಗಿದ್ದ 2019-20 ಸಾಲಿನ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಪ್ರಥಮ ಹಂತದ ಸಾಮಾಜಿಕ ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು, ಈ ವೇಳೆ ಸಾರ್ವಜನಿಕರು, ಗ್ರಾಮದಲ್ಲಿ ತಾಂಡವಾಡುತ್ತಿರುವ ಹಲವು ಸಮಸ್ಯೆಗಳನ್ನು ಬಗಿಹರಿಸುವಂತೆ ಹಲವು ಬಾರಿ ದೂರು ನೀಡಿದ್ದರೂ ಸಹ ಪ್ರಯೋಜನವಾಗಿಲ್ಲ. ಅಲ್ಲದೆ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳನ್ನು ಬಗೆಹರಿಸಲು ವಿಳಂಬ ಮಾಡುತ್ತಿರುವ ಬಗ್ಗೆ ಅಧಿಕಾರಗಳ ವಿರುದ್ಧ ಆಕ್ರೋಶದ ಮಾತುಗಳನ್ನಾಡಿದರು.

ನೋಡಲ್ ಅಧಿಕಾರಿ ಗುರುಸ್ವಾಮಿ ಮಾತನಾಡಿ, ಗ್ರಾಮಸ್ಥರ ಸಮಸ್ಯೆಗಳನ್ನು ಬಗೆಹರಿಸಲು ವಿಳಂಬ ಮಾಡದೇ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಪಿಡಿಒಗೆ ಕೆಲ ಸಲಹೆಗಳನ್ನು ನೀಡಿದರು.

ತಾಲೂಕು ಸಂಯೋಜಕ ನಾರಾಯಣ್, ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಪ್ರಥಮ ಹಂತದ ಸಾಮಾಜಿಕ ಗ್ರಾಮ ಸಭೆಯ ಕುರಿತು ಮಾತನಾಡಿದರು 

ಈ ಸಂದರ್ಭದಲ್ಲಿ ಅಧ್ಯಕ್ಷ ಭಾಗ್ಯ, ಉಪಾಧ್ಯಕ್ಷ ಸುನಂದಮ್ಮ, ಪಿಡಿಒ ಗಿರೀಶ್, ಕಾರ್ಯದರ್ಶಿ ರೂಪ, ಕರವಸೂಲಿಗಾರ ಬಾಲು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News