ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

Update: 2019-08-29 05:18 GMT

ಬೆಂಗಳೂರು, ಆ.29: ಪ್ರವಾಹ ಸಂತ್ರಸ್ತರ ನೆರವಿಗೆ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಕಾಂಗ್ರೆಸ್ ನಾಯಕರ ಪ್ರತಿಭಟನೆ ಸರಿಯಲ್ಲ. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸುವ ನೈತಿಕತೆ ಕಾಂಗ್ರೆಸ್ ನಾಯಕರಿಗಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸಂತ್ರಸ್ತರಿಗೆ ತುರ್ತು ನೆರವಾಗಿ ಹತ್ತು ಸಾವಿರ ರೂ. ನೀಡಲಾಗಿದೆ. ಮನೆ ನಿರ್ಮಾಣ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲ ಸಚಿವರು ಪ್ರವಾಹ ಭಾದಿತ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಪರಿಸ್ಥಿತಿ ಅಧ್ಯಯನ ಮಾಡಿದ್ದೇವೆ. ಕೇಂದ್ರ ತಂಡ ಸಹ ಪ್ರವಾಸ ಮಾಡಿ ವಸ್ತುಸ್ಥಿತಿ ತಿಳಿದುಕೊಂಡಿದೆ. ಆದಷ್ಟು ಶೀಘ್ರ ನಮಗೆ ನೆರವು ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News