'ಫಿಟ್ ಇಂಡಿಯಾ ಅಭಿಯಾನ'ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ

Update: 2019-08-29 08:13 GMT

ಬೆಂಗಳೂರು, ಆ.29: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 'ಫಿಟ್ ಇಂಡಿಯಾ ಅಭಿಯಾನ'ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ವಿಧಾನಸೌಧದ ಮುಂಭಾಗದಲ್ಲಿ ಧ್ಯಾನಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಕ್ರೀಡೆಯ ಉತ್ತೇಜನಕ್ಕಾಗಿ ಸರಕಾರ ಹಲವು ಯೋಜನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕಾರ್ಯನಿರತವಾಗಿದ್ದು, ಶೀಘ್ರದಲ್ಲಿಯೇ ಆ ಎಲ್ಲಾ ಯೋಜನೆಗಳು ಜಾರಿಗೆ ಬರುತ್ತವೆ. ಜೊತೆಗೆ ಮೋದಿ ಅವರ ಮಹತ್ವಾಕಾಂಕ್ಷೆ ಯ ಪಿಟ್ ಇಂಡಿಯಾ ಅಭಿಯಾನವನ್ನು ನಾವೆಲ್ಲರೂ ಸೇರಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು. ಅಲ್ಲದೆ, ಹಾಕಿ ಹಾಡುವ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹ ತುಂಬಿದರು.

ಈ ಸಂದರ್ಬದಲ್ಲಿ ಕ್ರೀಡಾಪಟು ಪ್ರಕಾಶ್ ನಂಜಪ್ಪ, ಸಲ್ಮಾನ್ ಪಾಷಾ, ಅರ್ಚನಾ ಕಾಮತ್ ಸಮಾರಂಭದಲ್ಲಿ ಭಾಗಿಯಾಗಿ ಯುವ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಲ್ಪನಾ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News