ಉಳ್ಳಾಲ: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Update: 2019-08-29 13:43 GMT

ಉಳ್ಳಾಲ: ಕಾಲೇಜು ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಸ್ತಿಕಟ್ಟೆಯಲ್ಲಿ ಗುರುವಾರ ನಡೆದಿದೆ.

ಆತ್ಮಹತ್ಯೆಗೈದವನನ್ನು ನಗರದ ಸಂತ ಅಲೋಶಿಯಸ್ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿ ಪ್ರತೀಕ್ (18 ) ಎಂದು ಗುರುತಿಸಲಾಗಿದೆ.

ತಂದೆ ಕಮಲಾಕ್ಷ ಹಾಗೂ ತಾಯಿ ಪದ್ಮಾಕ್ಷಿ ಕಂಕನಾಡಿಯ ಖಾಸಗಿ ಕೋ-ಆಪರೇಟಿವ್ ಬ್ಯಾಂಕ್ ಉದ್ಯೋಗಿಗಳಾಗಿದ್ದು, ಪ್ರತೀಕ್ ಗುರುವಾರ ತರಗತಿಗೆ ರಜೆ ಎಂದು ಮನೆಯಲ್ಲಿ ಉಳಿದುಕೊಂಡಿದ್ದ ಎನ್ನಲಾಗಿದೆ. ಆತನ ಪೋಷಕರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. 

ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News