ರಾಘವೇಶ್ವರ ಶ್ರೀ ವಿರುದ್ಧದ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ 15ನೆ ನ್ಯಾಯಮೂರ್ತಿ

Update: 2019-08-29 12:24 GMT

ಬೆಂಗಳೂರು, ಆ.29: ಹೊಸನಗರ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತಿ ಸ್ವಾಮೀಜಿ ಅವರ ಆಡಳಿತದಲ್ಲಿ ಶ್ರೀಮಠದಲ್ಲಿ ಆರ್ಥಿಕ ಅವ್ಯವಹಾರ ನಡೆದಿದ್ದು ಅವರನ್ನು ಪೀಠದಿಂದ ಕೆಳಗಿಳಿಸಬೇಕು ಎಂದು ಕೋರಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಹಿಂದೆ ಸರಿದಿದ್ದಾರೆ.

ಇದರಿಂದಾಗಿ ರಾಘವೇಶ್ವರ ಶ್ರೀಗಳ ವಿರುದ್ಧದ ಒಟ್ಟು ಪ್ರಕರಣಗಳಲ್ಲಿ ಇದೀಗ ವಿಚಾರಣೆಯಿಂದ 15 ಜನ ನ್ಯಾಯಮೂರ್ತಿಗಳು ಹಿಂದೆ ಸರಿದಂತಾಗಿದೆ.

ಗುರುವಾರ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಪ್ರಕರಣ ವಿಚಾರಣೆಗೆ ನಿಗದಿಯಾಗಿತ್ತು. ವಿಚಾರಣೆಗೆ ಪ್ರಕರಣವನ್ನು ಕೂಗಿದಾಗ ನವಾಝ್ ಅವರು ತಾವು ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದರು.

ಪ್ರಕರಣವನ್ನು ಬೇರೊಂದು ನ್ಯಾಯಪೀಠದ ಎದುರು ವಿಚಾರಣೆಗೆ ನಿಗದಿಪಡಿಸಲು ರಿಜಿಸ್ಟ್ರಾರ್ ಅವರಿಗೆ ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News