×
Ad

ಶಾಲೆಯ ಟಾಯ್ಲೆಟ್ ಸ್ವಚ್ಛಗೊಳಿಸುತ್ತಿರುವ ವಿದ್ಯಾರ್ಥಿಗಳು ವೀಡಿಯೊ ವೈರಲ್

Update: 2019-08-29 20:00 IST

 ಖಾಂಡ್ವಾ,ಆ.29: ಸಿಹಾದಾ ಗ್ರಾಮದಲ್ಲಿ ಇಬ್ಬರು ವಿದ್ಯಾರ್ಥಿಗಳು ಸರಕಾರಿ ಶಾಲೆಯ ಟಾಯ್ಲೆಟ್‌ನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು,ಖಾಂಡ್ವಾ ಜಿಲ್ಲಾಡಳಿತವು ಈ ಬಗ್ಗೆ ವಿಚಾರಣೆಯನ್ನು ಆರಂಭಿಸಿದೆ. ಈ ಕೆಲಸವನ್ನು ಮಾಡಿದರೆ ಪರೀಕ್ಷೆಯಲ್ಲಿ ಹೆಚ್ಚುವರಿ ಅಂಕಗಳನ್ನು ನೀಡುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ ಕೊಡಲಾಗಿತ್ತು ಎನ್ನಲಾಗಿದೆ. ಆದರೆ ಹಾಗೆ ಸೂಚಿಸಿದವರು ಯಾರು ಎನ್ನುವುದು ಸ್ಪಷ್ಟಗೊಂಡಿಲ್ಲ.

ವಿದ್ಯಾರ್ಥಿಯೋರ್ವನ ಕುಟುಂಬ ಸದಸ್ಯ ಸೋಮವಾರ ಈ ವೀಡಿಯೊವನ್ನು ಚಿತ್ರೀಕರಿಸಿದ್ದ ಎನ್ನಲಾಗಿದೆ. ಈ ವಿಷಯದಲ್ಲಿ ಅಧಿಕೃತ ವಿಚಾರಣೆಯನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

 ಇನ್ನೊಂದೆಡೆ,ಈ ಘಟನೆಯನ್ನು ಕ್ಷಮಿಸಿರುವ ಜಿಲ್ಲಾಧಿಕಾರಿ ತನ್ವಿ ಸುಂದ್ರಿಯಾಲ್ ಅವರು,ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಕುರಿತು ಪ್ರಾಯೋಗಿಕ ಶಿಕ್ಷಣವನ್ನು ನೀಡಿದರೆ ಮತ್ತು ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿದರೆ ತಪ್ಪೇನೂ ಇಲ್ಲ ಎಂದಿದ್ದಾರೆ. ಶಿಕ್ಷಕರು ನಿರ್ದಿಷ್ಟ ಸಮುದಾಯದ ವಿದ್ಯಾರ್ಥಿಗಳಿಗೆ ಟಾಯ್ಲೆಟ್ ಸ್ವಚ್ಛಗೊಳಿಸುವಂಂತೆ ಹೇಳಿದ್ದರೆ ತಪ್ಪಾಗುತ್ತಿತ್ತು ಎಂದೂ ಅವರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News