ತನಿಖಾ ಸಂಸ್ಥೆಗಳನ್ನು ದ್ವೇಷ ಸಾಧನೆಗೆ ದುರುಪಯೋಗ ಮಾಡುತ್ತಿರುವುದು ಖಂಡನಾರ್ಹ: ಸಿದ್ದರಾಮಯ್ಯ
Update: 2019-08-30 18:17 IST
ಬೆಂಗಳೂರು, ಆ.30: ಕೇಂದ್ರ ಸರಕಾರ ಸಿಬಿಐ, ಈ.ಡಿ. ಮೊದಲಾದ ಸ್ವಾಯತ್ತ ತನಿಖಾ ಸಂಸ್ಥೆಗಳನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ದುರುಪಯೋಗ ಮಾಡುತ್ತಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಎದುರಾಳಿಗಳನ್ನು ರಾಜಕೀಯವಾಗಿಯೇ ಎದುರಿಸಬೇಕೆ ಹೊರತು, ಹೀಗೆ ಅಧಿಕಾರಿ ದುರ್ಬಳಕೆ ಮೂಲಕ ಅಲ್ಲ. ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಕರ್ನಾಟಕದಲ್ಲಿ ಆಶ್ರಯ ಕೊಟ್ಟಿದ್ದಕ್ಕಾಗಿ ಕೇಂದ್ರ ಸರಕಾರ ಐಟಿ-ಈ.ಡಿ. ದುರ್ಬಳಕೆ ಮಾಡಿಕೊಂಡು ಡಿ.ಕೆ.ಶಿವಕುಮಾರ್ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಅವರು ಕಿಡಿಗಾರಿದ್ದಾರೆ.
ಅವರು ತಪ್ಪು ಮಾಡಿದ್ದರೆ ಕಾನೂನು ರೀತಿ ಕ್ರಮ ಕೈಗೊಳ್ಳಬಹುದಿತ್ತು. ಆದರೆ, ತನಿಖಾ ಸಂಸ್ಥೆಗಳನ್ನು ದ್ವೇಷ ಸಾಧನೆಗೆ ದುರುಪಯೋಗ ಮಾಡುತ್ತಿರುವುದು ಖಂಡನಾರ್ಹ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.