×
Ad

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಬಾಂಡ್‌ನ ಅಗತ್ಯಲ್ಲ

Update: 2019-08-30 18:46 IST

ಉಡುಪಿ, ಆ.30: ಉಡುಪಿ ಜಿಲ್ಲೆಯಲ್ಲಿ ಬೇರೆ ಜಿಲ್ಲೆಗಳಿಗಿಂತಲೂ ಅಧಿಕ ಸಾರ್ವಜನಿಕ ಗಣೇಶೋತ್ಸವ ಜರಗಲಿದ್ದು, ಈ ಹಿಂದೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪೋಲಿಸ್ ಠಾಣೆಗಳಲ್ಲಿ ಬಾಂಡ್ ಬರೆದು ನೀಡುವಂತೆ ಕೇಳುತ್ತಿದ್ದು, ಈ ಬಾರಿ ಯಾವುದೇ ರೀತಿಯ ಬಾಂಡ್ ನೀಡುವ ಅಗತ್ಯಲ್ಲ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ನಿಯುತ ಪರವಾನಿಗೆಯನ್ನು ಪಡೆದರೆ ಸಾಕು. ಈ ಬಗ್ಗೆ ಇತ್ತೀಚೆಗೆ ಮುಖ್ಯಮಂತ್ರಿಗಳನ್ನು ಭೇಟಿಯಾದಾಗ ಅವರ ಗಮನಕ್ಕೆ ತರಲಾಗಿದ್ದು, ಗಣೇಶೋತ್ಸವ ಮತ್ತು ಶೋಭಾಯಾತ್ರೆಯನ್ನು ಸಾರ್ವಜನಿಕರಿಗೆ ಮತ್ತು ಪೋಲಿಸ್‌ರಿಗೆ ಯಾವುದೇ ರೀತಿಯ ಮುಜುಗರ ಆಗದಂತೆ ಆಚರಿಸುವಂತೆ ಮಟ್ಟಾರ್ ರತ್ನಾಕರ ಹೆಗ್ಡೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News