ಬಿವಿಟಿ: ಉಚಿತ ಕಸೂತಿ, ಕರಕುಶಲತೆ ತರಬೇತಿಗೆ ಅರ್ಜಿ ಆಹ್ವಾನ
Update: 2019-08-30 18:49 IST
ಮಣಿಪಾಲ ಎ.30: ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟಿನಲ್ಲಿ ಸೆ.3ರಿಂದ 4 ವಾರಗಳ ಉಚಿತ ಕಸೂತಿ ಹಾಗೂ ಇತರ ಕರಕುಶಲತೆ ತರಬೇತಿ ಹಮ್ಮಿಕೊಳ್ಳಲಾಗಿದೆ. ಸ್ವಉದ್ಯೋಗ ಮಾಡಲು ಆಸಕ್ತಿ ಇರುವ ಮಹಿಳೆಯರು ಹಾಗೂ ಶಾಲಾ ಕಾಲೇಜು ಕಲಿಯುತ್ತಿರುವ /ವಿದ್ಯಾಭ್ಯಾಸ ಮುಗಿಸಿರುವ ಮಹಿಳಾ ಅಭ್ಯರ್ಥಿಗಳು ಈ ತರಬೇತಿಯ ಸದುಪಯೋಗ ಪಡೆದು ಕೊಳ್ಳಬಹುದು. ತರಬೇತಿಯ ಸಮಯದಲ್ಲಿ ಅಭ್ಯರ್ಥಿಗಳಿಗೆ ಉಚಿ ಊಟ, ಉಪಹಾರ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಮತ್ತು ವಿದ್ಯಾರ್ಹತೆಯನ್ನು ಬಿಳಿ ಹಾಳೆಯಲ್ಲಿ ಬರೆದು ಭಾರತೀಯ ವಿಕಾಸ ಟ್ರಸ್ಟ್, ಅನಂತ, ಪೆರಂಪಳ್ಳಿ, ಅಂಬಾಗಿಲು ರಸ್ತೆ, ಕುಂಜಿಬೆಟ್ಟು ಅಂಚೆ ಉಡುಪಿ - 576 102, ಈ ವಿಳಾಸಕ್ಕೆ ಅರ್ಜಿಯನ್ನು ಕಳುಸಿಕೊಡಬಹುದು.
ಅಥವಾ ದೂರವಾಣಿ ಸಂಖ್ಯೆ: (0820) 2570263, ಮೊಬೈಲು ಸಂಖ್ಯೆ: 7349315969 ಇದನ್ನು ಸಂಪರ್ಕಿಸುವ ಮೂಲಕ ತಮ್ಮ ಭಾಗವಹಿಸುಕೆಯನ್ನು ದೃಢೀಕರಿಸಬಹುದು ಎಂದು ಸಂಸ್ಥೆ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.