×
Ad

ಶಕ್ತಿ ಕಾಲೇಜಿನಲ್ಲಿ ‘ನೇತ್ರದಾನ ಮಹತ್ವ’ ಕಾರ್ಯಕ್ರಮ

Update: 2019-08-30 18:51 IST

ಮಂಗಳೂರು, ಆ.30: ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ನೇತ್ರದಾನದ ಮಹತ್ವದ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ‘ಸಕ್ಷಮ’ ಸಂಸ್ಥೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಜಯರಾಂ ಬೊಳ್ಳಾಜೆ, ಮರಣದ ನಂತರವೂ ನಮ್ಮ ಕಣ್ಣುಗಳು ಜೀವಂತವಾಗಿ ಇನ್ನೊಬ್ಬರ ಬದುಕಿಗೆ ಬೆಳಕಾಗಬಲ್ಲವು. ದಿನದಿಂದ ದಿನಕ್ಕೆ ಕಣ್ಣೀನ ಕಾರ್ನಿಯಾದ ಅಗತ್ಯ ಇರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ನೇತ್ರದಾನ ಮಾಡುವವರ ಸಂಖ್ಯೆ ಈ ದಿನಗಳಲ್ಲಿ ಹೆಚ್ಚುತ್ತಿದ್ದರೂ ದೇಶದಲ್ಲಿನ ಬೇಡಿಕೆಯನ್ನು ಪೂರೈಸಲು ಅದು ವಿಫಲವಾಗಿದೆ. ನೇತ್ರದಾನ ಮಾಡಬೇಕು. ಇದರಿಂದ ಕುರುಡುತನದಿಂದ ಬಳಲುವ ಜೀವಗಳಿಗೆ ದೃಷ್ಟಿ ನೀಡಿದಂತಾಗುತ್ತದೆ ಎಂದರು.

ಶಕ್ತಿ ಆಡಳಿತ ಮಂಡಳಿ ಸದಸ್ಯ ಹಾಗೂ ಸಕ್ಷಮ ಸಂಸ್ಥೆಯ ಜಿಲ್ಲಾ ಅಧ್ಯಕ್ಷ ಡಾ. ಮುರಳೀಧರ ನಾಕ್ ಮಾತನಾಡಿ, ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯುವ ಏಕೈಕ ಮಾರ್ಗ ನೇತ್ರದಾನ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಪ್ರಭಾಕರ ಜಿ.ಎಸ್. ಸಕ್ಷಮ ಸಂಸ್ಥೆಯ ಉಪ ಕಾರ್ಯದರ್ಶಿ ಸುರೇಶ್ ಪ್ರಭು ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಂಸ್ಕೃತ ಪ್ರಾಧ್ಯಾಪಕ ಶ್ರೀನಿಧಿ ಅಭ್ಯಂಕರ ಕಾರ್ಯಕ್ರಮ ನಿರೂಪಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಶಿಲ್ಪಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News