×
Ad

ಗೋವಿಂದೂರು ಘಟನೆ ಮಾಧ್ಯಮಗಳ ವಿರುದ್ಧ ಕ್ರಮಕ್ಕೆ ಎಸ್.ಕೆ.ಎಸ್.ಎಸ್.ಎಫ್ ಮನವಿ

Update: 2019-08-30 22:32 IST

ಮೂಡುಬಿದಿರೆ : ಬೆಳ್ತಂಗಡಿಯ ಗೋವಿಂದೂರಿನ ರವೂಫ್ ಪಾಕಿಸ್ತಾನದೊಂದಿಗೆ ಸೆಟಲೈಟ್ ಸಂಭಾಷಣೆ ನಡೆಸಿ ದೇಶದ್ರೋಹಗೈದಿದ್ದಾರೆಂದು ಸುಳ್ಳು ಸುದ್ಧಿ ಹಬ್ಬಿಸಿರುವ ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಸ್.ಕೆ.ಎಸ್.ಎಸ್.ಎಫ್. ಮೂಡುಬಿದಿರೆ ವಲಯ ಸಮಿತಿ ಆಗ್ರಹಿಸಿದೆ.

ಈ ಬಗ್ಗೆ ಸಮಿತಿಯು ಶುಕ್ರವಾರ ತಾಲೂಕು ಕಚೇರಿಯ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿದರು. ಸಮಿತಿಯ ಅಧ್ಯಕ್ಷ ಮಾಲಿಕ್ ಅಝೀಝ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ರವೂಫ್ ಬಂಧನದ ಬಗ್ಗೆ ರಾಜ್ಯಮಟ್ಟದ ಸುದ್ದಿವಾಹಿನಿಗಳು ಪೈಪೋಟಿಗೆ ಬಿದ್ದು, ಸುಳ್ಳು ಸುದ್ದಿ ಹಬ್ಬಿಸಿದ್ದವು. ಆ ಬಳಿಕ ಪೊಲೀಸರು ಸ್ಪಷ್ಟನೆ ನೀಡಿದರೂ ಮತ್ತೆ ಮತ್ತೆ ಬಂಧನದ ಸುದ್ದಿಯನ್ನು ನಿರಂತರ ಬಿತ್ತರಿಸಿ ಹಠಕ್ಕೆ ಬಿದ್ದವರಂತೆ ವರ್ತಿಸಿದ್ದು, ಸುಳ್ಳು ಸುದ್ದಿ ಬಿತ್ತರಿಸಿದ ಮಾಧ್ಯಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು. ನಂತರ ತಹಶೀಲ್ದಾರ್ ಅನಿತಾಲಕ್ಷ್ಮೀ ಅವರಿಗೆ ಮನವಿ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News