ಯಾರೂ ಅಧಿಕಾರ ದುರುಪಯೋಗ ಮಾಡಬಾರದು: ಮಾಜಿ ಸಿಎಂ ಸಿದ್ದರಾಮಯ್ಯ

Update: 2019-08-30 17:46 GMT

ಮೈಸೂರು,ಆ.30: ಯಾರೂ ಅಧಿಕಾರ ದುರುಪಯೋಗ ಪಡಿಸಿಕೊಳ್ಳುವಂತಹ ಕೆಲಸ ಮಾಡಬಾರದು ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ಸಮನ್ಸ್ ನೀಡಿರುವ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಕಾನೂನು ಹೋರಾಟ ಮಾಡುತ್ತಾ ಇದ್ದಾರೆ. ಹೈಕೋರ್ಟ್ ನಲ್ಲಿ ಅವರ ಅರ್ಜಿ ವಜಾ ಆಗಿರುವ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್ ಗೆ ಹೋಗುತ್ತಾರೆ. ಚಿದಂಬರಂ ಅವರನ್ನು ಅರೆಸ್ಟ್ ಮಾಡುವಂತಹ ಪ್ರಕರಣ ಅಲ್ಲ, ನ್ಯಾಚುರಲ್ ಜಸ್ಟೀಸ್ ಇರಬೇಕು. ಅದು ಕಾಣೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನೆರೆ ಪರಿಹಾರ ಬಿಡುಗಡೆಯಾಗದ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಿನ್ನೆ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಕೊಟ್ಟಿದ್ದೇವೆ. ಸಾಂಕೇತಿಕವಾಗಿ ನಿನ್ನೆ ಧರಣಿ ಮಾಡಿದ್ದೇವೆ. ಕೇಂದ್ರ ಸರಕಾರದಿಂದ ನೆರೆ ಪರಿಹಾರ ಹಣ ಬಂದಿಲ್ಲ. ಅವರು ರಾಜಕೀಯದಲ್ಲಿ ಮುಳುಗಿದ್ದಾರೆ. ಹೀಗಾಗಿ ಸರಕಾರಕ್ಕೆ ಎಚ್ಚರಿಕೆ ಕೊಡಲು ಪ್ರತಿಭಟನೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಬೀದಿಗೆ ಇಳಿದು ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.

ನಂತರ ಹೃದಯ ಚಿಕಿತ್ಸೆಗೆ ಒಳಗಾಗಿರುವ ಮಾಜಿ ಶಾಸಕ ವಾಸು ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. 

ಈ ಸಂದರ್ಭದಲ್ಲಿ ಮೇಯರ್ ಪುಷ್ಪಲತಾ ಜಗನ್ನಾಥ್, ಕಾಂಗ್ರೆಸ್ ಮುಖಂಡರಾದ ಕೆ.ಎಸ್.ಶಿವರಾಮು, ಮಂಜೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News