ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Update: 2019-08-30 18:41 GMT

ವಿದ್ಯಾರ್ಥಿವೇತನ

(ಅರ್ಹತೆ ಮತ್ತು ಆದಾಯ ಆಧಾರಿತ):

ಮರುಬೆನಿ ಇಂಡಿಯಾ ಮೆರಿಟೋರಿಯಸ್ ವಿದ್ಯಾರ್ಥಿವೇತನ 2019-20

ವಿವರ: ಪ್ರತಿಭಾನ್ವಿತ ಮತ್ತು ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಮರುಬೆನಿ ಇಂಡಿಯಾ ಪ್ರೈ.ಲಿ.,(ಎಂಐಪಿಎಲ್) ವಿದ್ಯಾರ್ಥಿವೇತನವನ್ನು ಘೋಷಿಸಿದೆ. ದೇಶಾದ್ಯಂತದ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನ ಪಡೆಯುವ ಅವಕಾಶವಿದೆ.

ಅರ್ಹತೆ: 12ನೇ ತರಗತಿಯಲ್ಲಿ (2018-19) ಕನಿಷ್ಠ ಶೇ. 75 ಅಂಕಗಳನ್ನು ಗಳಿಸಿರುವ ಭಾರತದಲ್ಲಿ ನೆಲೆಸಿರುವ ಮತ್ತು ಯಾವುದೇ ರಾಜ್ಯ/ಯುಜಿಸಿ ಪರಿಗಣಿತ ಸಂಸ್ಥೆಯಲ್ಲಿ ಯಾವುದೇ ಉನ್ನತ ಶಿಕ್ಷಣ ಪಡೆಯಲು ಬಯಸಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಹಾಕಬಹುದಾಗಿದೆ. ಕುಟುಂಬದ ವಾರ್ಷಿಕ ಆದಾಯ 4 ಲಕ್ಷ ರೂ.ಗೂ ಅಧಿಕವಿರದ ಮತ್ತು 6,000ರೂ. ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾರ್ಥಿವೇತನವನ್ನು ಪಡೆದುಕೊಳ್ಳದಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಹರಾಗುತ್ತಾರೆ.

ನೆರವು: ಆಯ್ದ ವಿದ್ಯಾರ್ಥಿಗಳಿಗೆ ಒಂದು ಸಲ ಪಾವತಿಸುವ 40,000ರೂ.-50,000ರೂ. ವಿದ್ಯಾರ್ಥಿವೇತನ ನೀಡಲಾಗುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟಂಬರ್ 25, 2019

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜಾಲತಾಣ: http://www.b4s.in/bharati/MIM5

**************

ವಿದ್ಯಾರ್ಥಿವೇತನ

(ಅರ್ಹತೆ ಮತ್ತು ಆದಾಯ ಆಧಾರಿತ):

ಶೆಫ್ಲರ್ ಇಂಡಿಯಾ ಹೋಪ್ ಇಂಜಿನಿಯರಿಂಗ್ ವಿದ್ಯಾರ್ಥಿವೇತನ 2019-20

ವಿವರ: ಇಂಜಿನಿಯರ್ ಆಗಲು ಬಯಸುವ ಪ್ರತಿಭಾನ್ವಿತ ವಿದ್ಯಾರ್ಥಿಗಳು ತಮ್ಮ ಪದವಿಪೂರ್ವ ಶಿಕ್ಷಣವನ್ನು ಪೂರ್ಣಗೊಳಿಸಲು ನೆರವಾಗುವ ಉದ್ದೇಶದಿಂದ ಶೆಫ್ಲರ್ ಇಂಡಿಯಾ ವಿದ್ಯಾರ್ಥಿವೇತನ ಘೋಷಿಸಿದೆ. ಈ ವಿದ್ಯಾರ್ಥಿವೇತನದಲ್ಲಿ ಆಯ್ದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ವೆಚ್ಚವನ್ನು ಭರಿಸಲು ಆರ್ಥಿಕ ನೆರವು ನೀಡಲಾಗುತ್ತದೆ.

ಅರ್ಹತೆ: ಹನ್ನೆರಡನೇ ತರಗತಿಯಲ್ಲಿ ಕನಿಷ್ಠ ಶೇ. 60 ಅಂಕಗಳನ್ನು ಪಡೆದಿರುವ ಮತ್ತು ಯಾವುದೇ ರಾಜ್ಯ/ಯುಜಿಸಿ ಪರಿಗಣಿತ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣ ಪಡೆಯುತ್ತಿರುವ ಗುಜರಾತ್, ಮಹಾರಾಷ್ಟ್ರ ಮತ್ತು ತಮಿಳುನಾಡಿನ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನ ಪಡೆಯಬಹುದಾಗಿದೆ. ಕುಟುಂಬದ ವಾರ್ಷಿಕ ಆದಾಯ ಐದು ಲಕ್ಷ ರೂ.ಗಿಂತ ಕಡಿಮೆಯಿರಬೇಕು.

ನೆರವು: ಆಯ್ದ ವಿದ್ಯಾರ್ಥಿಗಳಿಗೆ ಅವರ ಇಂಜಿನಿಯರಿಂಗ್ ವಿದ್ಯಾಭ್ಯಾಸದ ಅವಧಿಯಲ್ಲಿ ವಾರ್ಷಿಕ 75,000ರೂ. ನೆರವು ನೀಡಲಾಗುವುದು.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟಂಬರ್ 30, 2019

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಜಾಲತಾಣ: http://www.b4s.in/bharati/ SIHE1

************

ವಿದ್ಯಾರ್ಥಿವೇತನ

(ಅರ್ಹತೆ ಮತ್ತು ಆದಾಯ ಆಧಾರಿತ):

ಅಲ್ಪಸಂಖ್ಯಾತರಿಗಾಗಿ ಬೇಗಮ್ ಹಝ್ರತ್ ಮಹಲ್ ರಾಷ್ಟ್ರೀಯ ವಿದ್ಯಾರ್ಥಿವೇತನ ಯೋಜನೆ 2019-20

ವಿವರ: ಮೌಲಾನಾ ಆಝಾದ್ ಶಿಕ್ಷಣ ಪ್ರತಿಷ್ಟಾನ ಮತ್ತು ಎಂಒಎಂಎ, ಭಾರತ ಸರಕಾರ ಅಲ್ಪಸಂಖ್ಯಾತ ಸಮುದಾಯದ ಹೆಣ್ಮಕ್ಕಳಿಗಾಗಿ ವಿದ್ಯಾರ್ಥಿವೇತನ ಘೋಷಿಸಿದೆ. ಶಿಕ್ಷಣ ಮುಂದುವರಿಸಲು ಬಯಸುವ ಸೌಲಭ್ಯವಂಚಿತ ಬಾಲಕಿಯರಿಗೆ ಆರ್ಥಿಕ ನೆರವು ನೀಡುವ ಗುರಿಯನ್ನು ಈ ವಿದ್ಯಾರ್ಥಿವೇತನ ಹೊಂದಿದೆ.

  ಅರ್ಹತೆ: ಅಲ್ಪಸಂಖ್ಯಾತ ಸಮುದಾಯದ 9ರಿಂದ 12ನೇ ತರಗತಿ ವರಗೆ ಕಲಿಯುತ್ತಿರುವ ಈ ಹಿಂದಿನ ತರಗತಿಯಲ್ಲಿ ಕನಿಷ್ಠ ಶೇ. 50 ಅಂಕಗಳನ್ನು ಪಡೆದಿರುವ ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ. 2 ಲಕ್ಷಕ್ಕಿಂತ ಕಡಿಮೆ ಇರುವ ವಿದ್ಯಾರ್ಥಿನಿಯರು ಈ ಸ್ಕಾಲರ್‌ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ನೆರವು: ಆಯ್ಕೆಯಾದ ವಿದ್ಯಾರ್ಥಿನಿಯರು ತಮ್ಮ ವಿವಿಧ ಶೈಕ್ಷಣಿಕ ವೆಚ್ಚ ನಿಭಾಯಿಸಲು ತಿಂಗಳಿಗೆ ರೂ. 5,000 (9 ಹಾಗೂ 10ನೇ ತರಗತಿ) ಅಥವಾ ರೂ. 6,000 (11 ಹಾಗೂ 12ನೇ ತರಗತಿ) ಪಡೆಯಲಿದ್ದಾರೆ.

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟಂಬರ್ 30, 2019

ಅರ್ಜಿ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಜಾಲತಾಣ: http://www.b4s.in/bharati/MAN1

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News