×
Ad

ಗಗನಚುಂಬಿ ಕಟ್ಟಡದಿಂದ ಹಾರಿ ಬಾಲಿವುಡ್ ನಟಿ ಆತ್ಮಹತ್ಯೆ

Update: 2019-08-31 09:56 IST

ಮುಂಬೈ, ಆ.31: ಖಿನ್ನತೆಯಿಂದ ಬಳಲುತ್ತಿದ್ದ ಮಹತ್ವಾಕಾಂಕ್ಷಿ ಬಾಲಿವುಡ್ ನಟಿಯೊಬ್ಬರು ಮುಂಬೈನ ಗಗನಚುಂಬಿ ಕಟ್ಟಡವೊಂದರಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಮುಂಬೈನ ಒಶಿವರ ಉಪನಗರದ ಲೋಖಂಡ್‌ವಾಲಾ ಸಂಕೀರ್ಣದಲ್ಲಿರುವ ಕೆನ್‌ವುಡ್ ಅಪಾರ್ಟ್‌ಮೆಂಟ್‌ನ ಟೆರೇಸ್‌ನಿಂದ ಜಿಗಿದು ಪರ್ಲ್ ಪಂಜಾಬಿ (31) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಕಟ್ಟಡದಿಂದ ಅವರು ಜಿಗಿದ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗಾಗಲೇ ಅವರು ಕೊನೆಯುಸಿರೆಳೆದಿದ್ದರು. ಕಳೆದ ಕೆಲ ತಿಂಗಳಿಂದ ಖಿನ್ನತೆ ಹಾಗೂ ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಅವರು, ಇದೇ ಕಾರಣದಿಂದ ಆತ್ಮಹತ್ಯೆ ನಿರ್ಧಾರಕ್ಕೆ ಬಂದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಒಶಿವರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News