ಕಿನ್ನಿಕಂಬಳದಲ್ಲಿ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟ
ಮಂಗಳೂರು, ಆ.31: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ರೋಸಾ ಮಿಸ್ತಿಕಾ ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಇಲ್ಲಿನ ಕಾಲೇಜು ಕ್ರೀಡಾಂಗಣದಲ್ಲಿ ಮಂಗಳೂರು ಗ್ರಾಮಾಂತರ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟ ಆಯೋಜಿಸಲಾಗಿತ್ತು.
ಮುಖ್ಯಅತಿಥಿಗಳಾಗಿ ಆಗಮಿಸಿದ ವಂ.ಭಗಿನಿ ಜುಲಿಯಾನ ಮೋನಿಸ್ ಪಂದ್ಯಾಟ ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಂ.ಭಗಿನಿ ಲೊಲಿಟ ಪ್ರೇಮಾ ಮಾತನಾಡಿ, ಕ್ರೀಡೆ ಜೀವನದಲ್ಲಿ ಶಿಸ್ತು ಸಂಘಟನೆ, ನಾಯಕತ್ವ ಕಲಿಸಿ ಕೊಡುತ್ತದೆ. ಪರಸ್ಪರ ಸಹಕಾರ ಮನೋಭಾವನೆಯಿಂದ ರಾಷ್ಟ್ರೀಯ ಭಾವೈಕ್ಯತೆ ಮೂಡಲು ಸಹಕಾರಿಯಾಗುತ್ತದೆ ಎಂದರು.
ವೇದಿಕೆಯಲ್ಲಿ ಪ್ರೇಮನಾಥ್ ಶೆಟ್ಟಿ, ಜಫ್ರಿಯನ್ ತಾವ್ರೊ, ಜೋಸೆಫ್ ವಾಲ್ಟರ್ ಪೆರಿಸ್, ಪ್ರೆಸಿಲ್ಲಾ ಪಿಂಟೊ, ವಿಜಯ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಪ್ರಾಂಶುಪಾಲೆ ವಂ.ಭ. ಅನಿತಾ ಲೀಡಿಯಾ ಸ್ವಾಗತಿಸಿದರು. ಉಪನ್ಯಾಸಕಿ ಸುಜಾತಾ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಅಮ್ಸೀಲ್ ವಂದಿಸಿದರು.
ರೋಸಾ ಮಿಸ್ತಿಕಾ ಕಾಲೇಜು ಪ್ರಥಮ
ಬಾಲಕರ ವಿಭಾಗದಲ್ಲಿ ಕಿನ್ನಿಕಂಬಳದ ರೋಸಾ ಮಿಸ್ತಿಕಾ ಪಿಯು ಕಾಲೇಜು ಪ್ರಥಮ ಸ್ಥಾನ ಪಡೆಯಿತು. ಕಟೀಲು ಎಸ್‌ಡಿಪಿಟಿ ಪಿಯು ಕಾಲೇಜು ದ್ವಿತೀಯ ಸ್ಥಾನ ಅಲಂಕರಿಸಿತು.
ಬಾಲಕಿಯರ ವಿಭಾಗದಲ್ಲಿ ಕಿನ್ನಿಕಂಬಳದ ರೋಸಾ ಮಿಸ್ತಿಕಾ ಪಿಯು ಕಾಲೇಜು ಪ್ರಥಮ ಸ್ಥಾನಕ್ಕೆ ಲಗ್ಗೆ ಇಟ್ಟರೆ, ಸುಂಕದಕಟ್ಟೆ ಶ್ರೀ ನಿರಂಜನ ಸ್ವಾಮಿ ಪಿಯು ಕಾಲೇಜು ದ್ವಿತೀಯ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.