ಬಂಟ್ವಾಳ: ಸೆ.1ರಿಂದ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ
Update: 2019-08-31 18:22 IST
ಬಂಟ್ವಾಳ : ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2020 ಕುರಿತು ಮತದಾರರ ಪಟ್ಟಿಯ ಸೇರ್ಪಡೆ, ತೆಗೆದು ಹಾಕುವಿಕೆ ಹಾಗೂ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಇದರ ತಾಲೂಕು ಮಟ್ಟದ ಉದ್ಘಾಟನಾ ಕಾರ್ಯಕ್ರಮವು ಬಂಟ್ವಾಳ ತಾಲೂಕು ಆಡಳಿತ ತಾಲೂಕು ಪಂಚಾಯತ್ ಸಹಯೋಗದಲ್ಲಿ ಸೆ. 1ರಂದು ಬೆಳಿಗ್ಗೆ 10ಕ್ಕೆ ಬಿ.ಸಿ.ರೋಡಿನ ಮಿನಿವಿಧಾನ ಸೌಧದ ಕೊಠಡಿ ನಂ. 2ರಲ್ಲಿ ನಡೆಯಲಿದೆ.
ಸೆ.1ರಿಂದ 30ರವೆರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ಕ್ರಮ ಜರಗಿಸುವರು ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.